ಚುನಾವಣೆ ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಂದಕ್ಕೆ

0
24

ಬೆಂಗಳೂರು

     ಶಿವಮೊಗ್ಗ, ಮಂಡ್ಯ ಹಾಗೂ ಬಳ್ಳಾರಿ ಲೋಕಸಭಾ ಚುನಾವಣೆ ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 29ಕ್ಕೆ ಮುಂದೂಡಿದೆ.

      ಲೋಕಸಭೆ ಅವಧಿ ಮುಗಿಯಲು ಕೆಲವೇ ತಿಂಗಳುಗಳಿದ್ದು, ಹೀಗಾಗಿ ಉಪ ಚುನಾವಣೆ ರದ್ದು ಕೋರಿ ರಮೇಶ್ ನಾಯ್ಕ್, ಎ.ಪಿ.ರಂಗನಾಥ್ ಸೇರಿ ಮೂವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು.

       ಹೈಕೋರ್ಟ್ ವಿಭಾಗೀಯ ಪೀಠದಲ್ಲಿಂದು ಈ ಅರ್ಜಿಯ ವಿಚಾರಣೆ ನಡೆಯಿತು.ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ ಅರ್ಜಿ ಸಂಬಂಧ ಉತ್ತರ ನೀಡುವಂತೆ ಹೇಳಿ ಅಕ್ಟೋಬರ್ 29ಕ್ಕೆ ವಿಚಾರಣೆಯನ್ನ ಮುಂದೂಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here