ಮಧುಗಿರಿ
ಹೆಚ್ಚು ಪ್ಲಾಸ್ಟಿಕ್ ಬಳಕೆಯಿಂದ ಪರಿಸರದಲ್ಲಿ ಅಸಮತೋಲನವುಂಟಾಗಿ ಕೆಟ್ಟ ಪರಿಣಾಮ ಎದುರಾಗುತ್ತಿದೆ, ಪ್ಲಾಸ್ಟಿಕ್ ನಿಷೇಧಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಆರ್. ಪಲ್ಲವಿ ಕರೆ ನೀಡಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿಯ ಸಾಮಥ್ರ್ಯ ಸೌಧದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ತಾಲ್ಲೂಕು ವಕೀಲರ ಸಂಘ, ಮಧುಗಿರಿ ಕೃಷಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಭೂ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭೂಮಿಯಲ್ಲಿ ವಿವಿಧ ರೂಪಗಳಲ್ಲಿ ಪ್ಲಾಸ್ಟಿಕ್ ಶೇಖರಣೆಯಾಗುತ್ತಿದೆ. ಸಾವಿರ ವರ್ಷಗಳು ಕಳೆದರೂ ಅದು ಕೊಳೆಯದ ವಸ್ತು. ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಅತಿ ಹೆಚ್ಚು ಪ್ಲಾಸ್ಟಿಕ್ ವಸ್ತುಗಳನ್ನು ಅವಲಂಬಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಮುಂದಿನ ಪೀಳಿಗೆಗೆ ಅನಾಹುತ ಕಾದಿದೆ. ಎಲ್ಲರೂ ಪ್ಲಾಸ್ಟಿಕ್ ನಿಷೇಧಕ್ಕೆ ಸಹಕಾರ ನೀಡಬೇಕು ಹಾಗೂ ಭೂಮಿಯನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಉಪ ಕೃಷಿ ನಿರ್ದೇಶಕ ಆಶೋಕ್, ಸಹಾಯಕ ಕೃಷಿ ನಿರ್ದೇಶಕ ಡಿ. ಹನುಮಂತರಾಯಪ್ಪ, ನ್ಯಾಯಾಧೀಶರುಗಳಾದ ಹುಲ್ಲೂರು ಹೇಮಲತಾ ಬಸಪ್ಪ, ಎ.ಆರ್.ಎ ಮುಲ್ಲಾ, ಕಾವ್ಯಶ್ರೀ.ಎಂ, ಸರ್ಕಾರಿ ಅಭಿಯೋಜಕ ಮಹಮ್ಮದ್ ಆಜ್ಮಲ್ ಪಾಷ, ಬಿ.ಮೋಹನ್, ರುಕ್ಮಿಣಿ, ಶಂಕರ್ ನಾರಾಯಣ, ವಕೀಲರ ಸಂಘದ ಅಧ್ಯಕ್ಷ ಪಿ.ಸಿ ಕೃಷ್ಣಾರೆಡ್ಡಿ, ಎಂ.ಮಹೇಶ್, ಎಂ.ವಿ. ದಯಾನಂದಸಾಗರ್, ರೈತರು ಮುಂತಾದವರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ