ಹಿರಿಯೂರು :
ನಗರದ ಹುಳಿಯಾರು ರಸ್ತೆಯಲ್ಲಿರುವ ಕೆಗ್ ಅಂಡ್ ಪೆಗ್ ಮಧ್ಯದಂಗಡಿ ಮೇಲೆ ದಾಳಿ ಮಾಡಿರುವ ನಗರಸಭೆ ಆಯುಕ್ತ ಎಚ್.ಮಹಂತೇಶ್ ಸುಮಾರು 200 ಕೆ.ಜಿ. ಪ್ಲಾಸ್ಟಿಕ್ ವಶಪಡಿಸಿಕೊಂಡು ರೂ.5000 ದಂಡ ವಿಧಿಸಿದ್ದಾರೆ.
ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಗುರಿಯನ್ನು ಜಿಲ್ಲಾಧಿಕಾರಿಗಳು ಹೊಂದಿದ್ದು, ಈ ಬಗ್ಗೆ ವರ್ತಕರ ಸಭೆ ಕರೆದು ಜಾಗೃತಿ ಮೂಡಿಸಿದ್ದೆವು. ಶೇ. 90ರಷ್ಟು ವರ್ತಕರು ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಸುವುದಿಲ್ಲ ಎಂಬ ಫಲಕ ಹಾಕಿದ್ದಾರೆ. ಕೆಲವರು ಮಾತ್ರ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಅಂತಹವರನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗುತ್ತಿದೆ. ಇದು ಮುಂದುವರೆದರೆ ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಆಯುಕ್ತರು ಸುದ್ದಿಗಾರರಿಗೆ ತಿಳಿಸಿದರು.
ಕಲ್ಯಾಣ ಮಂಟಪಗಳಿಗೆ ಭೇಟಿ :
ನಮ್ಮ ಸಿಬ್ಬಂದಿ ಕಲ್ಯಾಣ ಮಂಟಪಗಳಿಗೆ ಹೋಗಿ ಪರಿಶೀಲನೆ ನಡೆಸುತ್ತಾರೆ. ಪ್ಲಾಸ್ಟಿಕ್ ಬಳಕೆ ಕಂಡುಬಂದಲ್ಲಿ ಕಲ್ಯಾಣ ಮಂಟಪಗಳ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ. ಮಾಲೀಕರು ಮದುವೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವವರಿಗೆ ಪ್ಲಾಸ್ಟಿಕ್ ಬಳಸದಂತೆ ಸೂಚನೆ ನೀಡಬೇಕು ಎಂಬುದಾಗಿ ಆಯುಕ್ತರಾದ ಮಹಂತೇಶ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ