ಹಿರೇಹಳ್ಳಿ ಗ್ರಾಮಕ್ಕೆ ಸರ್ಕಾರಿ ಸೌಲಭ್ಯಗಳಿಗಾಗಿ ತಹಶೀಲ್ದಾರ್‍ಗೆ ಮನವಿ

ಚಳ್ಳಕೆರೆ

         ತಾಲ್ಲೂಕಿನ ಕಳಕು ಹೋಬಳಿಯ ಹಿರೇಹಳ್ಳಿ ಗ್ರಾಮಕ್ಕೆ ಸರ್ಕಾರದಿಂದ ಹೆಚ್ಚಿನ ಸೌಲಭ್ಯಗಳು ದೊರೆಯದ ಹಿನ್ನೆಲೆಯಲ್ಲಿ ಅಸಮದಾನಗೊಂಡ ಇಲ್ಲಿನ ನೂರಾರು ಗ್ರಾಮಸ್ಥರು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ತಾಲ್ಲೂಕು ಕಚೇರಿಗೆ ಆಗಮಿಸಿ ಸೌಲಭ್ಯಗಳು ನೀಡುವಂತೆ ಮನವಿ ಪತ್ರ ಅರ್ಪಿಸಿದರು. ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಯುವಕ ಸಂಘ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ರೈತ ಸಂಘ, ವಾಲ್ಮೀಕಿ ಸಂಘ ಹಾಗೂ ವಿವಿಧ ಒಕ್ಕೂಟಗಳ ಪದಾಧಿಕಾರಿಗಳು ಆಗಮಿಸಿ ತಹಶೀಲ್ದಾರ್‍ಗೆ ಮನವಿ ನೀಡಿ, ತ್ವರಿತಗತಿಯಲ್ಲಿ ಸರ್ಕಾರಿ ಸೌಲಭ್ಯಗಳನ್ನು ಗ್ರಾಮಕ್ಕೆ ನೀಡುವಂತೆ ಮನವಿ ಮಾಡಿದರು.

          ಈ ಸಂದರ್ಭದಲ್ಲಿ ಮಾತನಾಡಿ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಎಸ್.ರಾಜಣ್ಣ,ಹಿರೇಹಳ್ಳಿ ಗ್ರಾಮ ತಳಕು ಹೋಬಳಿಯಲ್ಲಿದ್ದು ಮೊಳಕಾಲ್ಮೂರು ವಿಧಾನಸಭಾ ವ್ಯಾಪ್ತಿಯಲ್ಲಿದ್ದು, ಕಳೆದ ಹಲವಾರು ವರ್ಷಗಳಿಂದ ಈ ಗ್ರಾಮದ ಮೂಲಭೂತ ಸಮಸ್ಯೆಗಳು ಹಾಗೇ ಉಳಿದಿವೆ. ಇಲ್ಲಿನ ಜನತೆಗೆ ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ಹೆಚ್ಚಿನ ಸೌಲಭ್ಯಗಳನ್ನು ನೀಡಬೇಕಿದೆ.

          ಅಂದಾಜು 10 ಸಾವಿರಕ್ಕೂ ಹೆಚ್ಚು ಜನಸಂಖ್ಯೆವುಳ್ಳ ಈ ಗ್ರಾಮದಲ್ಲಿ ದಲಿತರು, ಬಡವರು, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮಧ್ಯಮ ವರ್ಗ ಹಾಗೂ ಶ್ರಮಿಕ ವರ್ಗದವರು ಹೆಚ್ಚಿದ್ದು, ಹಲವಾರು ಸಂಘಟನೆಗಳ ನೇತೃತ್ವದಲ್ಲಿ ಈಗಾಗಲೇ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಿದ ಮನವಿ ನೀಡಿದ್ದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಬರಗಾಲದಿಂದ ಬೇಸತ್ತ ಇಲ್ಲಿನ ಜನರಿಗೆ ಯಾವುದೇ ರೀತಿಯಲ್ಲಿ ತಾಲ್ಲೂಕು ಆಡಳಿತ ಸ್ಪಂದಿಸುತ್ತಿಲ್ಲ. ಉದ್ಯೋಗ ಖಾತರಿ ಯೋಜನೆಯಡಿ ಈ ಗ್ರಾಮದ ಬಡ ಜನರಿಗೆ ಹೆಚ್ಚು ಮಾನವ ದಿನಗಳನ್ನು ಕಲ್ಪಿಸಬೇಕಿದೆ. ಮುಖ್ಯವಾಗಿ ಗ್ರಾಮದ ಬಹುತೇಕರಿಗೆ ನಿವೇಶನ ಮತ್ತು ವಸತಿ ಎರಡೂ ಇಲ್ಲ. ಗ್ರಾಮದ ರಿ.ಸರ್ವೆ. 291ರಲ್ಲಿ ನಿವೇಶನ ನೀಡುವಂತೆ ಒತ್ತಾಯ ಪಡಿಸಿದ್ಧಾರೆ.

            ಡಿಎಸ್‍ಎಸ್‍ನ ಜಿಲ್ಲಾ ಸಂಚಾಲಕ ಆರ್.ರುದ್ರಮುನಿ ಮಾತನಾಡಿ, ಹಿರೇಹಳ್ಳಿ ಗ್ರಾಮ ಪ್ರಸ್ತುತ ರಾಜ್ಯ ಹೆದ್ದಾರಿಯಲ್ಲಿದ್ದು, ಮುಂಬರುವ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆಯಾಗಲಿದೆ. ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಇಲ್ಲಿನ ಪ್ರಾಥಮಿಕ ಆರೋಗ್ಯ ವಿಸ್ತರಣಾ ಕೇಂದ್ರಕ್ಕೆ ಖಾಯಂ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿದರು, ಗ್ರಾಮದ ಜನರಿಗೆ ಉದ್ಯೋಗ ನೀಡಲು ಕೆರೆಯ ಹೂಳನ್ನು ಎತ್ತಿಸಬೇಕು, 2014-15ನೇ ಸಾಲಿನ ಲಿಡ್ಕರ್ ತರಬೇತಿ ಪಡೆದ ಫಲಾನುಭವಿಗಳಿಗೆ ವಸತಿ ಮತ್ತು ಸಾಲ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿದರು.

          ತಹಶೀಲ್ದಾರ್ ಭರವಸೆ :- ಮನವಿ ಸ್ವೀಕರಿಸಿದ ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ, ಗ್ರಾಮದ ಹಿತದೃಷ್ಠಿಯಿಂದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮನವಿ ನೀಡಿದ್ದು, ಈ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ ಸಾಧ್ಯವಾದಷ್ಟು ಮಟ್ಟಿಗೆ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು. ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಎಸ್.ರಾಜಣ್ಣ, ಈ ಸಂದರ್ಭದಲ್ಲಿ ಬಿ.ತಿಪ್ಪೇಸ್ವಾಮಿ, ರಾಮಸ್ವಾಮಿ, ಸಾವಿತ್ರಮ್ಮ, ತಿಮ್ಮಕ್ಕ, ದುರುಗಮ್ಮ, ಮಾರಜ್ಜಿ ಮುಂತಾದವರು ತಹಶೀಲ್ದಾರ್ ಎಂ.ಮಲ್ಲಿಕಾರ್ಜುನರವರಿಗೆ ಮನವಿ ಅರ್ಪಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap