ಬಳ್ಳಾರಿ
ಕೇಂದ್ರ ಸರ್ಕಾರದ ಯೋಜನೆಯಾದ ಶ್ಯಾಮ್ ಪ್ರಸಾದ್ ಮುಖರ್ಜಿ ರಾಷ್ಟ್ರೀಯ ರೂರ್ಬನ್ ಮಿಷನ್ ಯೋಜನೆ ಅನುದಾನವನ್ನು ಹೆಚ್ಚುಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲಾಗುತ್ತದೆ ಎಂದು ಲೊಕಸಭಾ ಸದಸ್ಯರಾದ ವಿ.ಎಸ್.ಉಗ್ರಪ್ಪ ಅವರು ಹೇಳಿದರು.
ಮೋಕಾ ಗ್ರಾಮದ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಂಗಳವಾರದಂದು ಹಮ್ಮಿಕೊಂಡಿದ್ದ ಗ್ರಾಮಸಭೆಯಲ್ಲಿ ಉದ್ದೇಶಿಸಿ ಮಾತನಾಡಿದರು.
ಕೇಂದ್ರ ಸರ್ಕಾರದಿಂದ ಈ ಯೋಜನೆಗೆ ಶೇ.30 ರಷ್ಟು ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದ್ದು, ಇನ್ನೂ ಉಳಿದ ಶೇ.70 ರಷ್ಟು ಅನುದಾನವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಅನುಷ್ಠಾನ ಇಲಾಖೆಗಳಿಂದ ಭರಿಸಲಾಗುತ್ತಿದೆ. ಇದಲ್ಲದೇ ಈ ಯೋಜನೆಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.
ಗ್ರೇಡ್-1 ಪಂಚಾಯತ್ ಆಗಿರುವ ಮೋಕಾ ಗ್ರಾಪಂ ಮೂರನೇ ಹಂತಕ್ಕೆ ಈ ಯೋಜನೆ ಆಯ್ಕೆಯಾಗಿದ್ದು, ಮೋಕ ಕ್ಲಸ್ಟರ್ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಟಾನಕ್ಕಾಗಿ ತಯಾರಿಸಲು 50 ಕೋಟಿ ರೂ.ಗಳ ಅನುದಾನಕ್ಕೆ ಕ್ರೀಯಾ ಯೋಜನೆ ರೂಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ವಿಧಾನಪರಿಷತ್ ಸದಸ್ಯರಾದ ಕೆ.ಸಿ.ಕೊಂಡಯ್ಯ ಅವರು ಮಾತನಾಡಿ, ಕೇವಲ ಅಧಿಕಾರಿಗಳ ಮಾತ್ರವಲ್ಲದೇ ಸಾರ್ವಜನಿಕರು ಸಹ ಈ ಯೋಜನೆಗೆ ಸಹಕಾರ ನೀಡಿ ತಮ್ಮ ಗ್ರಾಮವನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ ಹಾಗೂ ಸಿಇಒ ಡಾ.ಕೆ.ವಿ.ರಾಜೇಂದ್ರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕರಾದ ಚಂದ್ರಶೇಖರ ಗುಡಿ, ತಾಪಂ ಅಧ್ಯಕ್ಷೆ ರಮೀಜಾ ಬೀ, ತಾಪಂ ಉಪಾಧ್ಯಕ್ಷೆ ಪುಷ್ಪಾವತಿ, ಜಿಪಂ ಸದಸ್ಯೆ ಹಂಪಮ್ಮ, ತಾಪಂ ಸದಸ್ಯ ಚೆನ್ನಪ್ಪ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಾನಕಿ ರಾಮ್.ಡಿ, ಗ್ರಾಪಂ ಅಧ್ಯಕ್ಷೆ ಪತ್ತಾರ್ ನಾಗಮ್ಮ, ಗ್ರಾಪಂ ಉಪಾಧ್ಯಕ್ಷೆ ಫತಿಮಾ ಮೂಬೀನ, ಸೇರಿದಂತೆ ಗ್ರಾಪಂ ಸದಸ್ಯರು, ಎಲ್ಲಾ ಅಧಿಕಾರಿಗಳು, ಸಾರ್ವಜನಿಕರು ಇತರೆ ಗಣ್ಯವ್ಯಕ್ತಿಗಳು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ