ನಕಲಿ ಜಾತಿ ಪ್ರಮಾಣ ಪತ್ರಗಳ ತಡೆಗೆ ಮನವಿ

0
12

ಎಂ ಎನ್ ಕೋಟೆ :

        ವಾಲ್ಮೀಕಿ ಗುರು ಪೀಠದ ಜಗದ್ಗುರುಗಳಾದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾ ಸ್ವಾಮಿಗಳ ನೇತೃತ್ವದಲ್ಲಿ ಎಸ್ ಟಿ ನಕಲಿ ಜಾತಿ ಪ್ರಮಾಣ ಪತ್ರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಹಾಗಲವಾಡಿ ಶಂಕರ್ ತಿಳಿಸಿದರು.

        ಗುಬ್ಬಿ ತಾಲ್ಲೂಕಿನ ಚೇಳೂರಿನಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅ.15ರಂದು ಸೋಮವಾರ ಬೆಳಿಗ್ಗೆ 11ಗಂಟೆಗೆ ವಾಲ್ಮೀಕಿ ವೃತ್ತದಿಂದ ಡಿ.ಸಿ ಕಛೇರಿ ವರೆಗೆ ಸಮಾಜದ ಬಂಧುಗಳು ಸಹಸ್ರಾರು ಸಂಖ್ಯೆಯಲ್ಲಿ ಬಂದು ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಜೂತೆಗೆ ಗುಬ್ಬಿ ತಾಲ್ಲೂಕಿನ ಸಮಾಜದ ಬಂಧುಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಇದು ನಮ್ಮ ವಾಲ್ಮೀಕಿ ಪ್ರಸನ್ನಾಂದ ಸ್ವಾಮಿಗಳ ಆಗ್ರವಾಗಿದೆ ಎಂದು ತಿಳಿಸಿದರು.

         ಪರಿಶಿಷ್ಟ ಪಂಗಡಗಳ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳ ವಿತರಣೆಯನ್ನು ರಾಜ್ಯದಂತೆ ತಡೆಗಟ್ಟುವಂತೆ ಆಗ್ರಹ ಮಾಡಲಾಗಿದೆ. ಪರಿಶಿಷ್ಟ ಪಂಗಡಕ್ಕೆ ರಾಜ್ಯ ಸರ್ಕಾರ 7.5 ಮೀಸಲಾತಿಯನ್ನು ಕೊಡಬೇಕು.ಉದ್ಯೋಗ ನೇಮಕಾಂತಿಯಲ್ಲಿ ಶೇ.3ರಿಂದ 7ಕ್ಕೆ ಮೀಸಲಾತಿಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಮಂಚಲದೊರೆ ರಮೇಶ್, ರಂಗಪ್ಪ,ತಿಮ್ಮರಾಜು ,ಪ್ರಸನ್ನಕುಮಾರ್, ಶಿವು, ರಾಜಣ್ಣ ,ಬಾಲರಾಜು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here