ಆಶ್ರಯ ಯೋಜನೆಯಡಿ ಸೂರು ಕಲ್ಪಿಸಲು ಒತ್ತಾಯ

ದಾವಣಗೆರೆ:

     ಅಸಂಘಟಿತ ಮುದ್ರಣ ಕಾರ್ಮಿಕರಿಗೆ ಆಶ್ರಯ ಯೋಜನೆಯಡಿ ಸೂರು ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ಅಸಂಘಟಿತ ಮುದ್ರಣ ಕಾರ್ಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಹೆಚ್.ರಾಜು ಒತ್ತಾಯಿಸಿದರು.

     ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸುಮಾರು 600 ಜನ ಮುದ್ರಣ ಕಾರ್ಮಿಕರು ನಮ್ಮ ಸಂಘದಲ್ಲಿ ನೋಂದಣಿಯಾಗಿದ್ದಾರೆ. ಇವರೆಲ್ಲರೂ ಅತ್ಯಂತ ಕಡು ಬಡವರಾಗಿದ್ದಾರೆ. ಈ ವರೆಗೂ ಇವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯ ಲಭ್ಯವಾಗಿಲ್ಲ ಎಂದು ಹೇಳಿದರು.

     ಒಂದು ಹೊತ್ತು ಊಟಕ್ಕೂ ಪರದಾಡುವ ಇವರಿಗೆ ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುವುದು ಕಷ್ಟವಾಗಿದೆ. ಈ ಬಗ್ಗೆ ಕಳೆದ 10 ವರ್ಷದಿಂದ ಮನವಿ ಸಲ್ಲಿಸುತ್ತಿದ್ದರೂ, ಸರ್ಕಾರ ಸ್ಪಂದಿಸಿಲ್ಲ. ಈಗಲಾದರೂ ಬಡ ಮುದ್ರಣ ಕಾರ್ಮಿಕರಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಿಸಿಕೊಡಬೇಕೆಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಎನ್.ರಾಜೇಂದ್ರ ಬಂಗೇರಾ, ಕಾರ್ಯದರ್ಶಿ ಲಕ್ಷ್ಮೀಕಾಂತ್, ರಾಘವೇಂದ್ರ, ಬಸವರಾಜ್, ವೀರಣ್ಣ ಮತ್ತಿತರರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap