ಬಳ್ಳಾರಿ
ತಂಬಾಕು ರಹಿತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬ ಅಧಿಕಾರಿಗಳ ಜೊತೆಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್.ಎಂ ಹೇಳಿದರು.
ನಗರದ ಅಪರ ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಮಂಗಳವಾರದಂದು ವಿಶ್ವ ತಂಬಾಕು ರಹಿತ ದಿನಾಚರಣೆಯ ಪೂರ್ವಭಾವಿ ಹಾಗೂ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜಿಲ್ಲಾ ಹಾಗೂ ತಾಲೂಕುವಾರು ವ್ಯಾಪ್ತಿಯಲ್ಲಿ ಆಕ್ರಮವಾಗಿ ತಂಬಾಕು ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು. ತಂಬಾಕು ಮಾರಾಟ ಮಾಡುವ ಮುಂಚೆ ತಂಬಾಕು ನಿಯಂತ್ರಣ ಕೋಶದಿಂದ ನೋಂದಣಿ ನಂತರ ಮಾತ್ರ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ. ನೋಂದಣಿಯಾಗದೆ ಆಕ್ರಮವಾಗಿ ಮಾರಾಟ ಕಂಡು ಬಂದರೆ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾ ಮತ್ತು ತಾಲೂಕು ಮಟ್ಟದ ತಂಬಾಕು ನಿಯಂತ್ರಣ ತನಿಖಾದಳದ ಅಧಿಕಾರಿಗಳು ಕಾರ್ಯಚರಣೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಮಹಾನಗರ ಪಾಲಿಕೆ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಾರಿಗೆ, ಆರೋಗ್ಯ, ಶಿಕ್ಷಣ, ಪೊಲೀಸ್, ಜಿಲ್ಲಾ ನಗರಾಭಿವೃದ್ಧಿ ಕೋಶ, ಅಬಕಾರಿ, ವಾಣಿಜ್ಯ ಮತ್ತು ವ್ಯಾಪಾರ ತೆರಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ವರದಿ ನೀಡಬೇಕು ಎಂದರು.
ಮೇ 31ರಂದು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಅಂಗವಾಗಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆÉ. ವಿಮ್ಸ್‍ನ ವೈದ್ಯಕೀಯ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಜಾಥಾದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ