ಪ್ರತಿಜ್ಞಾ ವಿಧಿ ಬೋಧಿಸಿದ ಕೃಷಿ ಸಚಿವರು

ಬೆಂಗಳೂರು

        ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಕೃಷಿ ಸಚಿವ ಎನ್.ಹೆಚ್. ಶಿವಶಂಕರರೆಡ್ಡಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

        ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಚಿವಾಲಯದ ಹಿರಿಯ ಅಧಿಕಾರಿಗಳು, ಸಿಬ್ಬಂದಿಗೆ ಕೃಷಿ ಸಚಿವರು ಪ್ರತಿಜ್ಞಾ ವಿಧಿ ಬೋಧಿಸಿದರು.

       ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣ ಸ್ಫೂರ್ತಿಯನ್ನು ಕಾಪಾಡುತ್ತೇನೆ. ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಲು ನಾನು ನನ್ನದೇ ಆದ ಕೊಡುಗೆಯನ್ನು ನೀಡುತ್ತೇನೆ. ಅಲ್ಲದೆ ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ನನ್ನನ್ನು ಅರ್ಪಿಸಿಕೊಳ್ಳುತ್ತೇನೆ ಹಾಗೂ ನನ್ನ ದೇಶಬಾಂಧವರಲ್ಲಿ ಈ ಸಂದೇಶವನ್ನು ಸಾರಲು ಶ್ರಮಿಸುತ್ತೇನೆ ಎಂದು ಕೃಷಿ ಸಚಿವ ಎನ್.ಹೆಚ್. ಶಿವಶಂಕರರೆಡ್ಡಿ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

         ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್‍ಸಿಂಗ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂಪರ್ವೆಜ್ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

       ಪ್ರತಿಜ್ಞಾವಿಧಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವರು ಭಾರತ ದೇಶವನ್ನು ಏಕೀಕರಣಗೊಳಿಸಲು ಸರ್ದಾರ್ ವಲ್ಲಭಭಾಯ್ ಪಟೇಲ್‍ರ ಕೊಡುಗೆ ಅಪಾರ. ಹರಿದು ಹಂಚಿಹೋಗಿದ್ದ ದೇಶವನ್ನು ಒಗ್ಗೂಡಿಸಿದ ಕೀರ್ತಿ ಸರ್ದಾರ್ ವಲ್ಲಭಾಯ್‍ಪಟೇಲ್‍ರಿಗೆ ಸಲ್ಲುತ್ತದೆ. ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ದೇಶದ ಉದ್ದಗಲಕ್ಕೂ ಅವರ ಸಂದೇಶಗಳನ್ನು ಪ್ರಚಾರಪಡಿಸೋಣ ಎಂದು ಕೃಷಿ ಸಚಿವರು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap