ಬೆಂಗಳೂರು
ಪ್ರಚೋದನಕಾರಿ ಭಾಷಣ ಮಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೆಪಿಸಿಸಿ ಬೆಂಗಳೂರು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಆನಂದ್, ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸೆ 15 ರಂದು ನಗರದ ಪುರಭವನದಲ್ಲಿ ಶ್ರೀರಾಮ ಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ನಾಯಕರು ಹಾಗೂ ಮುಸ್ಲಿಂ ಜನಾಂಗ, ಗೋಹತ್ಯೆ ವಿಷಯವನ್ನು ಪ್ರಸ್ತಾಪಿಸಿ ದೇಶಭಕ್ತ ಮುಸಲ್ಮಾನರು ಬಿಜೆಪಿಗೆ ಮತ ಹಾಕುತ್ತಾರೆ.
ಪಾಕಿಸ್ತಾನಕ್ಕೆ ಬೆಂಬಲಿಸುವವರು ಮತದಾನ ಮಾಡುವುದಿಲ್ಲ. ಮುಸ್ಲಿಂ ಮತ ಪಡೆದು ಗೆಲುವು ಸಾಧಿಸುವ ಶಾಸಕರು ಹಿಜಡಾಗಳು ಎಂದು ಅವಮಾನಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.ಈಶ್ವರಪ್ಪ ಅವರ ಈ ಹೇಳಿಕೆ ಹಿಂದೂ-ಮುಸ್ಲಿಂರ ನಡುವೆ ಸಂಘರ್ಷಕ್ಕೆ ಪ್ರೇರಣೆ ನೀಡುತ್ತದೆ. ರಾಜ್ಯದಲ್ಲಿ ಕೋಮುದೊಂಭಿ ಕೆರಳಿಸುವ ಉದ್ದೇಶವಾಗಿದೆ. ಇಂತಹ ಪ್ರಚೋದನಕಾರಿ ಹೇಳಿಕೆ ನೀಡಿರುವುದರಿಂದ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ