ಸೀಲ್ ಡೌನ್ : ಅನಗತ್ಯ ಓಡಾಟ ಮಾಡುವವರ ಮೇಲೆ ಕಣ್ಣಿಟ್ಟ ಖಾಖಿ ಪಡೆ

ಬೆಂಗಳೂರು

    ನಗರದ ಹೆಚ್ಚು ಕೊರೊನಾ ಪ್ರಕರಣಗಳಿರುವ ಐದು ಪ್ರದೇಶಗಳನ್ನು ಸೀಲ್ಡೌನ್ ಮಾಡಲಾಗಿದ್ದು, ಈ ವ್ಯಾಪ್ತಿಯ ಪೊಲೀಸ್ ಠಾಣೆಯ ಸಿಬ್ಬಂದಿ ಬ್ಯಾರಿಕೇಡ್ ಅಳವಡಿಕೆ ಮಾಡಿ ಅನಗತ್ಯ ಓಡಾಟ ಮಾಡುವವರ ಮೇಲೆ ಕಣ್ಣಿಟ್ಟಿದ್ದಾರೆ.

      ಸೀಲ್ಡೌನ್ ಪ್ರದೇಶಗಳಲ್ಲಿ ಅನಗತ್ಯ ಓಡಾಟ ಮಾಡುವವರ ಮೇಲೆ ಕ್ರಮ ಕೈಗೊಳ್ಳುವಂತೆ ನಿನ್ನೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಸೂಚನೆ ನೀಡಿದ್ದರು.ಹೀಗಾಗಿ ಸಿದ್ದಾಪುರ, ವಿ.ವಿಪುರಂ, ಚಿಕ್ಕಪೇಟೆ, ಕೆ.ಆರ್ ಮಾರುಕಟ್ಟೆ, ಕಲಾಸಿಪಾಳ್ಯ ಪ್ರದೇಶಗಳಲ್ಲಿ ಮಾಸ್ಕ್ ಹಾಕದೇ ವಿನಾಕಾರಣ ಓಡಾಟ ಮಾಡಿದರೆ ಅಂತವರ ವಿರುದ್ಧ ಸಂಬಂಧಪಟ್ಟ ಠಾಣೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ( ಎನ್ಡಿಎಂಎ)ಯಡಿ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಲಾಗಿದೆ.

     ಈಗಾಗಲೇ ಸೀಲ್ಡೌನ್ ಆಗಿರುವ ಐದು ಪ್ರದೇಶಗಳಲ್ಲಿಕೊರೊನಾ ಪ್ರಕರಣಗಳು ಅತಿ ಹೆಚ್ಚು ವರದಿಯಾಗಿವೆ. ಅದರಲ್ಲೂ ಕೆ.ಆರ್ ಮಾರುಕಟ್ಟೆ, ಕಲಾಸಿಪಾಳ್ಯ ಠಾಣೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಭದ್ರತೆ, ಗಸ್ತು ತಿರುಗಲು ಭಯ ಪಡುವ ವಾತಾವರಣ ನಿರ್ಮಾಣವಾಗಿದೆ. ಹಿರಿಯ ಅಧಿಕಾರಿಗಳು ಕೂಡ ಆದಷ್ಟು ಜಾಗೃತೆಯಿಂದ ಕೆಲಸ ನಿರ್ವಹಣೆ ಮಾಡುವಂತೆ ಸಿಬ್ಬಂದಿಗೆ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap