ಚಿತ್ರದುರ್ಗ
ಅಯೋಧ್ಯೆ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಣೆ ಹಿನ್ನಲೆಯಲ್ಲಿ ಚಿತ್ರದುರ್ಗದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು,ಸತತ 40 ದಿನಗಳ ಸುದೀರ್ಘ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್ ಶನಿವಾರ ತೀರ್ಪು ಪ್ರಕಟಿಸಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯಾಧ್ಯಂತ ಜಿಲ್ಲಾಡಳಿತ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಕ್ರಮ ಕೈಗೊಂಡಿದೆ.
ಶನಿವಾರ ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಚಿತ್ರದುರ್ಗದಲ್ಲಿ ಬೆಳಿಗ್ಗೆಯಿಂದಲೇ ಜನಸಂಚಾರ ವಿರಳವಾಗಿತ್ತು. ತೀರ್ಪಿನ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಪರಿಣಾಮ ಬೀರಿಲ್ಲ. ಎಂದಿನಂತೆ ವಾಣಿಜ್ಯವಹಿವಾಟು, ವಾಹನಗಳ ಸಂಚಾರ ಇತ್ತು.ದೇಶದ ಜನತೆಯ ಕುತೂಹಲ ಕೆರಳಿಸಿದ್ದ ಆಯೋಧ್ಯೆಯ ರಾಮ ಜನ್ಮಭೂಮಿ ಭೂ ವಿವಾದ ಇತ್ಯರ್ಥಗೊಂಡಿದೆ. ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ನ್ಯಾಯಪೀಠವು ಅಂತಿಮ ತೀರ್ಪು ಪ್ರಕಟಿಸಿದೆ.
ವಿವಾದಿತ ಭೂಮಿ ಮಂದಿರಕ್ಕೆ, ಮಸೀದಿಗೆ ಪ್ರತ್ಯೇಕ ಜಾಗ ಹಂಚಿಕೆ ಮಾಡಿ ತೀರ್ಪು ನೀಡಲಾಗಿದ್ದು, ವರ್ಷಾನುವರ್ಷದಿಂದ ಕಗ್ಗಂಟಾಗಿದ್ದ ಈ ಸಿವಿಎಲ್ ಕೇಸಿಗೆ ಸಂಬಂಧಿಸಿದಂತೆ ತಕರಾರು ಅರ್ಜಿ ಸಲ್ಲಿಸಿದ್ದ ಅಯೋಧ್ಯಾ ನಿವಾಸಿ ದರ್ಜಿ ಕುಟುಂಬಸ್ಥರು ಸುಪ್ರೀಂಕೋರ್ಟಿನ ತೀರ್ಪನ್ನು ಸ್ವಾಗತಿಸಿ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದ ಅವರು ಸರ್ಕಾರವು ತನ್ನ ಹೊಣೆಯನ್ನು ಅರಿತು ಮಸೀದಿಗೆ ಸೂಕ್ತ ಜಾಗವನ್ನು ನೀಡಿದರೆ, ಮುಸ್ಲಿಮರಿಗೂ ವಿಜಯ ಸಿಕ್ಕಂತಾಗುತ್ತದೆ ಎಂದು ಹೇಳಿದರು.
ಜಸ್ಟೀಸ್ ಬೊಬ್ಡೆ ಅವರಲ್ಲದೆ, ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ಚಂದ್ರಚೂಡ್, ಜಸ್ಟೀಸ್ ಭೂಷಣ್, ಜಸ್ಟೀಸ್ ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠವು, ಶನಿವಾರ ದಂದು ನ್ಯಾಯಾಲಯಕ್ಕೆ ರಜೆ ಇದ್ದರೂ ಕಾರ್ಯ ನಿರ್ವಹಿಸಿ, ವಿವಾದಿತ ಭೂ ಭಾಗವನ್ನು ರಾಮಜನ್ಮಭೂಮಿ ನ್ಯಾಸ್ ಗೆ ಮಸೀದಿ ನಿರ್ಮಾಣಕ್ಕಾಗಿ 5 ಎಕರೆ ಪ್ರತ್ಯೇಕ ನೀಡುವಂತೆ ಸರ್ಕಾರಕ್ಕೆ ಸೂಚಿಸಿದೆ. ಜೊತೆಗೆ ಟ್ರಸ್ಟ್ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಗಡುವು ನೀಡಲಾಗಿದೆ
ಕಳೆದ ಹಲವಾರು ದಶಕಗಳಿಂದ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಅಯೋಧ್ಯೆ ರಾಮನ ಮಂದಿರ ಮತ್ತು ಬಬಾರಿ ಮಸೀದಿ ವಿವಾದಕ್ಕೆ ಇಂದು ನ್ಯಾಯಾಲಯ ಅಂತಿಮ ತೀರ್ಪನ್ನು ಪ್ರಕಟ ಮಾಡುವುದರ ಮೂಲಕ ಒಂದು ರೀತಿಯಲ್ಲಿ ನಿರ್ಣಯಕ್ಕೆ ಬಂದಿದೆ, ಆದರೆ ಈ ತೀರ್ಪನ್ನು ಬಹುತೇಕ ಜನತೆ ಸಮ್ಮತಿಸಿದ್ದಾರೆ ಕೆಲವೇ ಜನತೆ ಮಾತ್ರ ಅಸಮ್ಮತಿಸಿದ್ದಾರೆ.
ನ್ಯಾಯಾಲಯ ಇಂದು ಅಯೋಧ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ನೀಡಲಾಗುತ್ತದೆ ಎಂದು ಎಲ್ಲಡೆ ಬಿಗಿಯಾದ ಭದ್ರತೆಯನ್ನು ಮಾಡಲಾಗಿತ್ತು. ಚಿತ್ರದುರ್ಗದಲ್ಲಿಯೂ ಸಹಾ ಪೋಲಿಸ್ ಇಲಾಖೆ ಸೂಕ್ತವಾದ ಕ್ರಮವನ್ನು ತೆಗೆದುಕೊಂಡಿತ್ತು ಇದಕ್ಕೂ ಮುನ್ನಾ ನಿನ್ನೆ ಹಲವಾರು ಸಂಘಟನೆಗಳು ತೀರ್ಪಿನ ಹಿನ್ನಲೆಯಲ್ಲಿ ಯಾವುದೇ ರೀತಿಯ ಆಹಿತಕರವಾದ ಘಟನೆ ನಡೆಯದಂತೆ ಮುಂಜಾಗ್ರತೆಯನ್ನು ಮಾಡುವಂತೆ ಸರ್ಕಾರ ಮತ್ತು ಪೋಲಿಸ್ ಇಲಾಖೆಯನ್ನು ಆಗ್ರಹಿಸಿದ್ದವು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ