ವಿರೇನ್ ಮನೆಯಲ್ಲಿ ಪೊಲೀಸ್ ಸಮವಸ್ತ್ರ ಪತ್ತೆ : ಸಂದೀಪ್ ಪಾಟೀಲ್

ಬೆಂಗಳೂರು

    ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಎರಡು ಕಡೆ ದಾಳಿ ಮಾಡಲಾಗಿದೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

    ಈಗಾಗಲೇ ಬಂಧನಕ್ಕೊಳಗಾಗಿರುವ ವೀರೇನ್ ಖನ್ನಾ ಹಾಗೂ ನಟಿ ಸಂಜನಾ ಗಲ್ರಾನಿ ನಿವಾಸದ ಮೇಲೂ ಬೆಳ್ಳಂಬೆಳಗ್ಗೆ ದಾಳಿ ಮಾಡಿ ಶೋಧ ಕಾರ್ಯ ನಡೆಸಲಾಗಿದೆ ಎಂದರು.ಇನ್ನು, ವಿರೇನ್ ನಿವಾಸದಲ್ಲಿ ಪೊಲೀಸ್ ಸಮವಸ್ತ್ರ ಪತ್ತೆಯಾಗಿದೆ. ಈ ಸಮವಸ್ತ್ರವನ್ನು ಯಾತಕ್ಕಾಗಿ ಅವರ ಮನೆಯಲ್ಲಿಟ್ಟಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಹೀಗಾಗಿ ಈ ಕುರಿತು ಸಂಪೂರ್ಣವಾಗಿ ತನಿಖೆ ಕೈ ಗೊಳ್ಳಲಾಗುವುದು. ಅದರ ಹಿಂದಿನ ಉದ್ದೇಶವೇನಿತ್ತು? ಅದನ್ನು ಯಾರು ಧರಿಸುತ್ತಿದ್ದರು ಎಂಬುದರ ಕುರಿತು ತನಿಖೆ ಕೈಗೊಳ್ಳಲಾಗುವುದು ಎಂದರು.

    ದಾಳಿ ವೇಳೆ ವಿರೇನ್ ಮನೆಯಲ್ಲಿ ಸಾಕಷ್ಟು ವಸ್ತುಗಳು ಪತ್ತೆಯಾಗಿದ್ದು, ಅವುಗಳ ಮಾಹಿತಿ ಕಲೆ ಹಾಕಲಾಗುವುದು ಎಂದರು.
ಸದ್ಯ ಸಿಸಿಬಿ ಅಧಿಕಾರಿಗಳ ತನಿಖೆ ಸರಿಯಾದ ಮಾರ್ಗದಲ್ಲಿ ನಡೆಯುತ್ತಿದೆ. ಸಂಪೂರ್ಣ ತನಿಖೆಯಾದ ಬಳಿಕ ಎಲ್ಲವನ್ನು ಬಹಿರಂಗಪಡಿಸಲಾಗುವುದು ಎಂದರು.

    ಸದ್ಯ ಸಂಜನಾ ಅವರನ್ನು ಸಿಸಿಬಿ ಪೊಲೀಸರು ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ. ದೆಹಲಿ ಸೇರಿ ಬೆಂಗಳೂರಿನ ಶಾಂತಿನಗರದಲ್ಲಿರುವ ವಿರೇನ್ ಖನ್ನಾ ಹಾಗೂ ಸಂಜನಾ ಅವರ ಇಂದಿರಾ ನಗರದ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap