ಬೆಂಗಳೂರು:
ರಾಜ್ಯದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಚಟುವಟಿಕೆಗೆ ವಿರಾಮ ನೀಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, 18 ಜಿಲ್ಲೆಗಳ ರೈತರು ಮುಂಗಾರು ಬೆಳೆಯನ್ನು ಕಳೆದುಕೊಂಡಿದ್ದು, ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಲು ಹಣವಿಲ್ಲದೆ ಪರಿತಪಿಸುತ್ತಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ಸರ್ಕಾರ ಬದುಕುಳಿಯುವುದು ಮುಖ್ಯವಲ್ಲ. ರೈತರ ರಕ್ಷಣೆಗೆ ಧಾವಿಸಲು ಆದ್ಯತೆ ನೀಡಬೇಕೆಂದು ಸಲಹೆ ಮಾಡಿದ್ದಾರೆ.
ರೈತರ ಸಾಲಮನ್ನಾ ಯೋಜನೆ ಕೇವಲ ಕಣ್ಣೊರೆಸುವ ತಂತ್ರವಾಗಿದೆ. ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 50ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯದಲ್ಲಿ ಇಡೀ ರೈತ ಕುಟುಂಬ ಆತ್ಮಹತ್ಯೆಗೆ ಶರಣಾಗಿರುವುದು ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಸಾಕ್ಷಿಯಾಗಿದೆ ಎಂದು ಯಡಿಯೂರಪ್ಪ ಆಪಾದಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/09/BSY-KPL.gif)