ಹಾವೇರಿ :
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದಿಂದ ನಿರ್ಮಿಸಲಾಗಿರುವ ಮೈಲಾರ ಕ್ಷೇತ್ರದ ಶಾಖಾ ಮಠವನ್ನು ಮೇ,8ರಿಂದ ಮೂರು ದಿನಗಳ ಕಾಲ ಲೋಕಾರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಇದರ ಅಂಗವಾಗಿ ಮೇ.1 ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ಕಾಗಿನೆಲೆಯ ಶ್ರೀಮಠದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಜಿಲ್ಲಾ ಕರ್ನಾಟಕ ಪ್ರದೇಶ ಕುರುಬ ಸಂಘದಿಂದ ಈ ಸಭೆಯನ್ನು ಕರೆಯಲಾಗಿದು,್ದ ದಿವ್ಯ ಸಾನಿಧ್ಯವನ್ನು ಶ್ರೀಮಠದ ಅಮೋಘಸಿದ್ದ ಸ್ವಾಮಿಜಿಗಳು ವಹಿಸಿಕೊಳ್ಳಲಿದ್ದಾರೆ. ಸಂಘದ ಜಿಲ್ಲಾ, ತಾಲೂಕಾ ಘಟಕದ ಪದಾಧಿಕಾರಿಗಳು, ಸಮಾಜದ ಮುಖಂಡರು ಗಣ್ಯರು, ಕುರುಬ ಜನಾಂಗ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಕನಕಾಭಿಮಾನಿಗಳು ಈ ಸಭೆಯಲ್ಲಿ ಭಾಗವಹಿಸಿ ಶಾಖಾ ಮಠದ ಲೋಕಾರ್ಪಣಾ ಕಾರ್ಯಕ್ರಮದ ಕುರಿತು ಸಲಹೆ ಸೂಚನೆ ನೀಡಬೇಕೆಂದು ಜಿಲ್ಲಾಧ್ಯಕ್ಷರಾದ ಮಾರುತಿ ಹರಿಹರ, ಜಿಲ್ಲಾ ಕಾರ್ಯದರ್ಶಿ ಹನುಮಂತಗೌಡ ಗಾಜೀಗೌಡ್ರ ತಿಳಿಸಿದ್ದಾರೆ.