ಹಾವೇರಿ :
ತಾಲೂಕ ಪಂಚಾಯತ ಸಭಾಭವನದಲ್ಲಿ ಮತದಾರರ ಜಾಗೃತಿ(ಸ್ವಿಪ್ ಪ್ರಗತಿ ಪರಿಶೀಲನಾ) ಸಭೆ ಜರುಗಿತು. ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀಮತಿ ಅನ್ನಪೂರ್ಣ ಮುದುಕಮ್ಮನವರ ಎಲ್ಲ ಮತಗಟ್ಟೆಗಳಲ್ಲಿ ಪೂರ್ಣ ಪ್ರಮಾಣದ ಮತದಾನ ಮಾಡಲು ಅಧಿಕಾರ ವರ್ಗದವರು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ಸೂಚನೆ ನೀಡಿದರು. ಸಭೆಯಲ್ಲಿ ತಾಲೂಕ ಪಂಚಾಯತಿಯ ಯೋಜನಾಧಿಕಾರಿಗಳಾದ ಕುಮಾರ ಮಣ್ಣವಡ್ಡರ, ತಾಲೂಕ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶ್ರೀಮತಿ ಪುಷ್ಪಲತಾ ಬಿದರಿ, ಪ್ರಶಾಂತಯ್ಯ, ತಾಲೂಕ ಪಂಚಾಯತಿ ಸಿಬ್ಬಂದಿ ವರ್ಗದವರು, ಸೆಕ್ಟರ ಅಧಿಕಾರಿಳು ತಾಲೂಕ ಮಟ್ಟದ ಅಧಿಕಾರಿಗಳು ಮತ್ತು ಪಂಚಾಯತ ಆಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.