ಬೆಂಗಳೂರು
ಚುನಾವನಾ ಆಯೋಗಕ್ಕೆ ತಪ್ಪು ಆಸ್ತಿ ಪ್ರಮಾಣಪತ್ರ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಎರಡು ವಾರಗಳ ಗಡುವು ನೀಡಿದೆ. ಮಾಜಿ ಸಚಿವ ಹಾಗೂ ಪರಾಜಿತ ಅಭ್ಯರ್ಥಿ ಎ.ಮಂಜು ಮತ್ತು ವಕೀಲರಾದ ಜಿ.ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ವಿಚಾರಣೆಯನ್ನು ಮುಂದೂಡಿದರು.
ಪ್ರಜ್ವಲ್ ರೇವಣ್ಣ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಆದರೆ, ಇದನ್ನೊಪ್ಪ ನ್ಯಾಯಪೀಠ ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 18ಕ್ಕೆ ಮುಂದೂಡಿತು.
ಪ್ರಜ್ವಲ್ ರೇವಣ್ಣ ಲೋಕಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ತಪ್ಪು ಆಸ್ತಿ ವಿವರವನ್ನೊಳಗೊಂಡ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಎ.ಮಂಜು ಅರ್ಜಿಯಲ್ಲಿ ಆಕ್ಷೇಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ