ಬೆಂಗಳೂರು :
ಡಿಸೆಂಬರ್ 10 ರೊಳಗೆ ವಾಲ್ಮೀಕಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ. 7.5 ರಷ್ಟು ಮೀಸಲಾತಿ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸದಿದ್ದರೆ ಸಮುದಾಯದ ಶಾಸಕರು ಮತ್ತು ಸಚಿವರು ರಾಜೀನಾಮೆ ನೀಡಲಿದ್ದಾರೆ ಎಂದು ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಪ್ರಸ್ತುತ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಆಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ಹಿಂದೆ ತೆಗೆದುಕೊಂಡಿದ್ದೇನೆ. ನೀತಿ ಸಂಹಿತೆ ಮುಗಿದ ಒಂದು ತಿಂಗಳೊಳಗೆ ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಬೇಕೆಂದು ಆಗ್ರಹಿಸಿದರು.
ವಾಲ್ಮೀಕಿ ಸಮುದಾಯಕ್ಕೆ ಸಾಂವಿಧಾನಿಕವಾಗಿ ಮೀಸಲಾತಿ ನೀಡುವುದು ಸರ್ಕಾರದ ಕರ್ತವ್ಯ. ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ವಾಲ್ಮೀಕಿ ಸಮುದಾಯ ಹಿಂದುಳಿದಿದೆ. ನಮ್ಮ ಬೇಡಿಕೆ ಈಡೇರಿಸದಿದ್ದರೆ ಸಮುದಾಯದ ಶಾಸಕರು ಮತ್ತು ಸಚಿವರು ರಾಜೀನಾಮೆ ನೀಡಲು ಸಿದ್ಧರಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/10/prasannandapuri.gif)