ಹೊಸದುರ್ಗ:
ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವಿಧರ ಶಿಕ್ಷಕರ ಸಂಘವು ಪದವಿ ವಿಧ್ಯಾರ್ಹತೆ ಮತ್ತು ಸೇವಾ ಅನುಭವ ಇರುವ ಸೇವಾನಿತರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಂಬಡ್ತಿಗೆ ಪರಿಗಣಿಸುವಂತೆ ಆಗ್ರಹಿಸಿ ಇಲ್ಲಿನ ಕೇತ್ರಾ ಶಿಕ್ಷಾಣಾಧಿಕಾರಿ ಕಛೇರಿ ಮುಂದೆ ಸಾಂಕೇತಿಕ ಧರಣಿ ನಡೆಸಿ ಬಿಇಓ ಎಲ್.ಜಯಪ್ಪರವರಿಗೆ ಮನವಿ ಪತ್ರವನ್ನು ನೀಡಿದರು.
ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್ ಮಾತನಾಡಿ ಹೊಸದುರ್ಗ ತಾಲ್ಲೂಕಿನ ರಾಜ್ಯದಲ್ಲಿ 82 ಸಾವಿರಕ್ಕಿಂತಲೂ ಅಧಿಕ ಪದವಿ ಪಡೆದ ಅನುಭವಿ ಶಿಕ್ಷಕರು 14 ವರ್ಷಗಳಿಂದ 6-8 ನೇ ತರಗತಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.ಆದರೆ ರಾಜ್ಯ ಸರ್ಕಾರ ಪದವಿ ವಿಧ್ಯಾರ್ಹತೆ ಮತ್ತು ಸೇವಾ ಅನುಭವ ಇರುವ ಶಿಕ್ಷಕರಿಗೆ ಮುಂಬಡ್ತಿ ಸೌಲಭ್ಯವನ್ನು ನೀಡದೇ ಅನ್ಯಾಯ ಮಾಡಿದೆ. ಆದ್ದರಿಂದ ಮೇಲಾಧಿಕಾರಿಗಳು ಮತ್ತು ಸರ್ಕಾರದ ಗಮನಕ್ಕೆ ತಂದು ನಮಗೆ ನ್ಯಾಯ ಒದಗಿಸಿಕೊಡುವಂತೆಬಿಇಓ ರವರಿಗೆ ಒತ್ತಾಯಿಸಿದರು.
ನೌಕರರ ಸಂಘದ ಅಧ್ಯಕ್ಷ ಎಂ.ಆರ್ ಶಾಂತಪ್ಪ ಮಾತನಾಡಿ ಈಗಾಗಲೇ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ(6-8ನೇ ತರಗತಿ) ಹುದ್ದೆಗಳನ್ನು ಎರಡು ಬಾರಿ ನೇರ ನೇಮಕ ಮಾಡಿದ್ದು ಈಗ ಮತ್ತೊಮ್ಮೆ ನೇರ ನೇಮಕ ಮಾಡಿಕೊಳ್ಳುತ್ತಿದೆ. ಕೂಡಲೇ ಶಿಕ್ಷಣ ಸಚಿವರು ಹಾಗೂ ರಾಜ್ಯ ಸರ್ಕಾರ ಪದವಿ ವಿಧ್ಯಾರ್ಹತೆ ಮತ್ತು ಸೇವಾ ಅನುಭವ ಇರುವ ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಕಾಂತರಾಜು, ಪ್ರಧಾನ ಕಾರ್ಯದರ್ಶಿ ಲುಂಕೇಶ್, ಕೋಶಾಧ್ಯಕ್ಷ ಪ್ರದೀಪ್‍ಕುಮಾರ್, ಉಪಾಧ್ಯಕ್ಷರಾದ ಶ್ರೀಮತಿ ಪರಮ್ಮ ಹಾಗೂ ಕಮಲಮ್ಮ, ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿಗಳಾದ ಬಸವರಾಜು ಮತ್ತು ದೇವೆಂದ್ರಪ್ಪ, ಸಹ ಕಾರ್ಯದರ್ಶಿಗಳಾದ ಪುಟ್ಟರಾಜು ಮತ್ತು ಜಯಪ್ರಕಾಶ್ ಹಾಗೂ ಇನ್ನಿತರೆ ಶಿಕ್ಷಕ ವೃಂದದವರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
