ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ

ಬಳ್ಳಾರಿ

        ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಅವರ ಪ್ರತಿಭೆಯನ್ನು ಹೊರಹಾಕುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಂತ ಕಾರ್ಯಕ್ರಮಗಳು ಸಹಕಾರಿ ಎಂದು ಜಿಪಂ ಉಪಾಧ್ಯಕ್ಷೆ ಪಿ.ದೀನಾ ಮಂಜುನಾಥ ಅಭಿಪ್ರಾಯಪಟ್ಟರು.

       ಜಿಲ್ಲಾಡಳಿತ,ಜಿಪಂ,ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕೋಟೆ ಪ್ರದೇಶದಲ್ಲಿರುವ ಸಂತಜಾನ್ ಪ್ರೌಢಶಾಲೆ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ 2018-19ನೇ ಸಾಲಿನ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

        ಪ್ರತಿಯೊಂದು ಮಕ್ಕಳಲ್ಲಿ ಒಂದೊಂದು ಶಕ್ತಿ(ಪ್ರತಿಭೆ) ಅಡಗಿದ್ದು, ಅವುಗಳನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ನಮ್ಮ ಶಿಕ್ಷಕರು ಹಾಗೂ ಪೋಷಕರು ಮಾಡಬೇಕು ಎಂದು ಅವರು ಸಲಹೆ ನೀಡಿದರು.

         ಶಾಲಾ ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಪಾಠದ ಜತೆಗೆ ನಮ್ಮ ನಾಡಿನ ಕಲೆ ಮತ್ತು ಸಂಸ್ಕøತಿಯನ್ನು ಅತ್ಯಂತ ಪರಿಣಾಮಕಾರಿಯಾಗಿ ತಿಳಿಸುವ ಕೆಲಸ ಮಾಡಿ ಎಂದು ಸಲಹೆ ನೀಡಿದ ಅವರು, ನಮ್ಮ ಜಿಲ್ಲೆಯ ಹೆಚ್ಚಿನ ಮಕ್ಕಳು ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಿಂಚಿ ಹೆಚ್ಚಿನ ಪ್ರಶಸ್ತಿಗಳನ್ನು ತರುವುದರ ಮೂಲಕ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಶುಭಹಾರೈಸಿದರು.

          ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸೌಭಾಗ್ಯ ತಿರುಮುಲ ಅವರು ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹಾಕಿಸುವ ಮತ್ತು ಅವರ ಪ್ರತಿಭೆಗೆ ನೀರೆರೆದು ಪೋಷಿಸುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದ್ದು,ಅದನ್ನು ಸಮರ್ಪಕವಾಗಿ ನಿಭಾಯಿಸಿ ಎಂದರು.

         ಜಿಲ್ಲಾಮಟ್ಟದ ಪ್ರತಿಭಾಕಾರಂಜಿಗೆ ನಿಯೋಜಿತರಾದ ತೀರ್ಪುಗಾರರರು ಅತ್ಯಂತ ನಿಷ್ಪಕ್ಷಪಾತವಾಗಿ ಪ್ರತಿಭಾವಂತರನ್ನು ಆಯ್ಕೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.

        ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾದ್ಯಕ್ಷ ಸಿ.ನಿಂಗಪ್ಪ, ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಡಾ.ಕೆ.ಹನುಮಂತಪ್ಪ, ಸಂತ್ ಜಾನ್ ಸಂಸ್ಥೆಯ ಮುಖ್ಯಸ್ಥ ಫಾದರ್ ಜೋಶ್ ಪ್ರಕಾಶ ಹಾಗೂ ಇನ್ನೀತರರು ಮಾತನಾಡಿದರು.

         ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಧರನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತಿಭಾಕಾರಂಜಿಯ ಧ್ಯೇಯೊದ್ದೇಶಗಳನ್ನು ವಿವರಿಸಿದರು. ಮುಂದಿನ ವಾರ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮೈಸೂರಿನಲ್ಲಿ ನಡೆಯಲಿದ್ದು, ಈ ಜಿಲ್ಲಾಮಟ್ಟದಿಂದ ಆಯ್ಕೆಯಾದ ಪ್ರತಿಭೆಗಳು ಅದರಲ್ಲಿ ಭಾಗವಹಿಸಲಿವೆ ಎಂದರು.

         ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷೆ ರಮೀಜಾ ಬಿ, ಕ್ಷೇತ್ರಶಿಕ್ಷಣಾಧಿಕಾರಿಗಳಾದ ಖೈರುನ್ನೀಸಾ ಬೇಗಂ, ರಮೇಶ ರಾಮಚಂದ್ರಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಹಾಗೂ ಎ.ಕೆ.ರಾಮಣ್ಣ, ಡಾ.ವಿ.ಟಿ.ದಕ್ಷಿಣಮೂರ್ತಿ, ಎಸ್.ಪರ್ವೆಜ್ ಅಹ್ಮದ್, ಎಚ್.ಶಿವನಾಯ್ಕ, ಕೆ.ಯರ್ರಿಸ್ವಾಮಿ, ರಾಮಾಂಜಿನಿ, ಮರಿಸ್ವಾಮಿ ರೆಡ್ಡಿ ಸೇರಿದಂತೆ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಶಿಕ್ಷಕರು ಮತ್ತು ಪ್ರತಿಭಾ ಕಾರಂಜಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವಿದ್ಯಾರ್ಥಿಗಳು ಇದ್ದರು.ವಿಷಯ ಪರಿವೀಕ್ಷಕ ಸತ್ಯನಾರಾಯಣ ನಿರೂಪಿಸಿದರು. ವಿಷಯ ಪರಿವೀಕ್ಷಕ ಎಚ್.ವೀರೇಶಪ್ಪ ಅವರು ವಂದಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link