ಹುಳಿಯಾರು:
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಬ್ರಹ್ಮವಿದ್ಯಾನಗರದ ಭಗೀರಥ ಗುರುಪೀಠದಲ್ಲಿ ಪ್ರತಿ ತಿಂಗಳ 10 ರಂದು ‘ಭಗೀರಥ ಪ್ರಯತ್ನ, ಸಂಕಲ್ಪ ಹಾಗೂ ಗುರಿ ಸಾಧನೆ’ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದು ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ತಿಳಿಸಿದರು.
ವಿವಿಧ ಉಪ ಪಂಗಡಗಳಾಗಿ ಹರಿದು ಹಂಚಿ ಹೋಗಿರುವ ಉಪ್ಪಾರ ಸಮಾಜದವರು ರಾಜ್ಯದಲ್ಲಿ 40 ಲಕ್ಷಕ್ಕೂ ಅಧಿಕ ಜನರಿದ್ದಾರೆ. ಸಮಾಜವನ್ನು ಸಂಘಟಿಸುವ ಉದ್ದೇಶದಿಂದ ಕಾರ್ಯಕ್ರಮ ನಡೆಸಲು ತೀರ್ಮಾನಿಸ ಲಾಗಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.
ಪ್ರತಿ ತಿಂಗಳ 10ರಂದು ಶ್ರೀಮಠದಲ್ಲಿ ರಾಜ್ಯದ ಒಂದೊಂದು ಜಿಲ್ಲೆಯ ಉಪ್ಪಾರ ಸಂಘದ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ. ಸಮಾರಂಭದಲ್ಲಿ ಗುರಿ ಸಾಧನೆಯ ಸಂಕಲ್ಪ ಹೇಗಿರಬೇಕು ಎಂಬ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ನೀಡಲಾಗುವುದು’ ಎಂದು ಹೇಳಿದರು.
ಶರಣರು, ಸಾಧು–ಸಂತರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ಆಶಯವೂ ನಮ್ಮದು. ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಇರುತ್ತದೆ. ಪ್ರತಿ ತಿಂಗಳು ಸಾಧಕರನ್ನು ಸನ್ಮಾನಿಸಲಾಗುವುದು. ಭಕ್ತರಿಗೆ ಪ್ರಸಾದದ ವ್ಯವಸ್ಥೆ ಏರ್ಪಡಿಸಲಾಗುವುದು’ ಎಂದು ತಿಳಿಸಿದ್ದಾರೆ.