ಬಳ್ಳಾರಿ
ಹಡಗಲಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ದಿವಾಕರ್ ಅಧ್ಯಕ್ಷತೆಯಲ್ಲಿ ಸೆಕ್ಟರ್ ಅಧಿಕಾರಿಗಳು, ಗ್ರಾಮ ಪಂಚಾಯತಿಗಳ ಪಿ.ಡಿ.ಓ.ಗಳು ಮತ್ತು ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಮತಗಟ್ಟೆಗಳ ಸಿಧ್ದತೆಗಳು, ಮಾದರಿನೀತಿ ಸಂಹಿತೆ ಜಾರಿಗೊಳಿಸುವ ಕುರಿತು ಸಭೆ ಹಡಗಲಿ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಈ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಅಚ್ಚುಕಟ್ಟು ಪಾಲನೆ, ಮತಗಟ್ಟೆಗಳಿಗೆ ಸೌಕರ್ಯ ಕಲ್ಪಿಸುವಂತೆ ಸೂಚನೆ ಸಹಾಯಕ ಚುನಾವಣಾಧಿಕಾರಿಗಳು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ರಾಘವೇಂದ್ರರಾವ್ ಹಾಗೂ ಚುನಾವಣೆಗೆ ನಿಯೋಜಿತರಾದ ಸಿಬ್ಬಂದಿ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
