ಬಳ್ಳಾರಿ
ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಸೆ.17ರಂದು ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಉತ್ಸವ ದಿನಾಚರಣೆಯನ್ನು ಆಚರಿಸಲಾಗುವುದು.ಜಿಲ್ಲಾಡಳಿತದ ವೆಬ್‍ಸೈಟ್ ಮೂಲಕವೂ ಕಾರ್ಯಕ್ರಮದ ನೇರಪ್ರಸಾರದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊರೊನಾ ಮಹಾಮಾರಿಯ ಈ ಹೊತ್ತಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಕೇಂದ್ರ ಸರಕಾರದ ಎಸ್‍ಒಪಿ ನಿಯಮಗಳ ಅನುಸಾರ(ಮಾಸ್ಕ್ ಧರಿಸುವಿಕೆ,ಸ್ಯಾನಿಟೈಸರ್,ಸಾಮಾಜಿಕ ಅಂತರ ಹಾಗೂ ಇನ್ನೀತರ ಕ್ರಮಗಳು)ಆಚರಣೆ ಮಾಡಿದಂತೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಸ್ಪಷ್ಟಪಡಿಸಿದ ಎಡಿಸಿ ಪಿ.ಎಸ್.ಮಂಜುನಾಥ ಅವರು ಜಿಲ್ಲಾಮಟ್ಟದ ಅಧಿಕಾರಿಗಳು,ಸರಕಾರಿ ನೌಕರರು,ಸಂಘ-ಸಂಸ್ಥೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.
ಸೆ.17ರಂದು ಬೆಳಗ್ಗೆ 9ಕ್ಕೆ ಬಳ್ಳಾರಿ ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್.ಆನಂದಸಿಂಗ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.9.15ಕ್ಕೆ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಸಚಿವರು ಮಾಲಾರ್ಪಣೆ ಮಾಡಿ ನಂತರ ಧ್ವಜಾರೋಹಣದ ಸಂದೇಶ ನೀಡಲಿದ್ದಾರೆ ಎಂದು ವಿವರಿಸಿದ ಎಡಿಸಿ ಮಂಜುನಾಥ ಅವರು ನಂತರ ಸಿರಿಗೇರೆ ಪೊನ್ನರಾಜ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.
ಬಳ್ಳಾರಿ ಜಿಲ್ಲಾಡಳಿತದ ಮೂಲಕ ನೇರ ಪ್ರಸಾರ: ಕೊರೊನಾ ಮಹಾಮಾರಿ ಕಾರಣ ಈ ಬಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸದ ಹಿನ್ನೆಲೆ ಅವರನ್ನು ಮನೆಯಲ್ಲಿಯೇ ಕುಳಿತುಕೊಂಡು ಬಳ್ಳಾರಿ ಜಿಲ್ಲಾಡಳಿತದ bಚಿಟಟಚಿಡಿi.ಟಿiಛಿ.iಟಿ ವೆಬ್‍ಸೈಟ್‍ನಲ್ಲಿನ ಲಿಂಕ್ ಮೂಲಕವೂ ನೇರ ಪ್ರಸಾರ ವೀಕ್ಷಿಸಬಹುದಾಗಿದೆ.ಇದಕ್ಕೆ ತಕ್ಕ ವ್ಯವಸ್ಥೆ ಮಾಡಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಈ ನೇರಪ್ರಸಾರ ವೀಕ್ಷಣೆಗೆ ಸಂಬಂಧಿಸಿದಂತೆ ಹೆಚ್ಚಿನ ಪ್ರಮಾಣದಲ್ಲಿ ಪ್ರಚುಪರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಕಳೆದ ಬಾರಿಯಂತೆ ಯಾರ್ಯಾರಿಗೆ ಯಾವ್ಯಾವ ಜವಾಬ್ದಾರಿಗಳನ್ನು ವಹಿಸಲಾಗಿತ್ತೋ ಆ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅವರು ಸೂಚಿಸಿದರು.ಹೋರಾಟಗಾರ ಸಿರಿಗೆರೆ ಪೊನ್ನರಾಜ್, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
