ಸ್ವಚ್ಛ ಮತದಾರರ ಪಟ್ಟಿ ತಯಾರಿಕೆಗೆ ಸಹಕರಿಸಿ : ಜಿಲ್ಲಾಧಿಕಾರಿ

ಹಾವೇರಿ
     ಮತದಾರರ ಪಟ್ಟಿ ಪರಿಷ್ಕರಣೆ, ದೃಢೀಕರಣ, ಸ್ವಚ್ಛಗೊಳಿಸುವ ಕಾರ್ಯಕ್ರಮ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 1 ರಿಂದ ಅಕ್ಟೋಬರ್ 15ರವರೆಗೆ ಒಂದುವರೆ ತಿಂಗಳ ಕಾಲ ನಡೆಯಲಿದ್ದು, ನಾಗರಿಕರು  ಮತದಾರರ ಪಟ್ಟಿಗೆ ಸೇರ್ಪಡೆ ಹಾಗೂ ಮಾರ್ಪಾಡಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಮನವಿ ಮಾಡಿಕೊಂಡಿದ್ದಾರೆ.
     ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಇವಿಪಿ ಕಾರ್ಯಕ್ರಮ(ಮತದಾರರ ಪಟ್ಟಿ ಪರಿಷ್ಕರಣೆ, ದೃಢೀಕರಣ, ಸ್ವಚ್ಛಗೊಳಿಸುವುದು)ಕ್ಕೆ ಚಾಲನೆ ನೀಡಿ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಮತದಾರರ ಪಟ್ಟಿಯಲ್ಲಿ ಕೈಬಿಟ್ಟುಹೋದವರು, ವಿಳಾಸ ಬದಲಾವಣೆ, ಬೇರೆಡೆಗೆ ಮತದಾರರ ಹೆಸರು ಬದಲಾಯಿಸಲು ಇಚ್ಛಿಸುವವರು, ಪರಿಷ್ಕರಣೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
    ಮೃತಪಟ್ಟವರು, ಅನರ್ಹರರನ್ನು ಪಟ್ಟಿಯಿಂದ ಕೈಬಿಡಲಾಗುವುದು. ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಯಾವುದೇ ಗೊಂದಲಗಳಿಲ್ಲದೆ ಸ್ವಚ್ಛವಾದ ಮತದಾರರ ಪಟ್ಟಿ ಸಿದ್ಧವಾಗಬೇಕು. ರಾಜ್ಯಕ್ಕೆ ಮಾದರಿಯಾಗಿಬೇಕು ಈ ನಿಟ್ಟಿನಲ್ಲಿ ಎಲ್ಲ ಇಲಾಖಾ ಅಧಿಕಾರಿಗಳು ಹಾಗೂ ನಾಗರಿಕರು ಇವಿಪಿ ಕಾರ್ಯಕ್ರಮಕ್ಕೆ ಸಹಕಾರ ನೀಡಬೇಕು ಎಂದು ಹೇಳಿದರು.
    ಮತದಾರರು ತಮ್ಮ ದಾಖಲೆಗಳಾದ ಭಾರತೀಯ ಪಾಸಪೋರ್ಟ್, ಚಾಲನಾ ಪರವಾನಿಗೆ, ಆಧಾರ ಪತ್ರ, ಪಡಿತರ ಚೀಟಿ, ಸರ್ಕಾರಿ/ಅರೆ ಸರ್ಕಾರಿ ನೌಕರರು ಹೊಂದಿರುವ ಗುರುತಿನ ಚೀಟಿ, ಬ್ಯಾಂಕ್ ಪಾಸ್‍ಬುಕ್, ರೈತರ ಗುರುತಿನ ಚೀಟಿ ಮತ್ತು ಚುನಾವಣಾ ಆಯೋಗ ಅನುಮೋದಿಸಿರುವ ಯಾವುದೇ ಇತರೆ ದಾಖಲೆಗಳು ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಯೊಂದಿಗೆ ನಿಮ್ಮ ಹತ್ತಿರದ ಕೇಂದ್ರಗಳಾದ ಸಾಮಾನ್ಯ ಸೇವಾ ಕೇಂದ್ರ, ಮತದಾರರ ನೊಂದಣಾಧಿಕಾರಿಗಳ ಕಛೇರಿ, ಬೆಂಗಳೂರು-1/ಕರ್ನಾಟಕ-1 ಕೇಂದ್ರ, ಅಟಲ್ ಜನ ಸ್ನೇಹಿ ಕೇಂದ್ರ, ಬಾಪೂಜಿ ಸೇವಾ ಕೇಂದ್ರ(ಗ್ರಾಮ ಪಂಚಾಯತಿ) ಮತ್ತು ಮತಗಟ್ಟೆ ಅಧಿಕಾರಿಗಳು (ಬಿಎಲ್‍ಓ)ರವರು ಮನೆಮನೆಗೆ ಭೇಟಿ ನೀಡುವವರಿದ್ದು ಅವರ ಭೇಟಿ ನೀಡಿದ ಸಮಯದಲ್ಲಿ ಹಾಜರಿಪಡಿಸುವುದು. ಇನ್ನು ನಾಗರಿಕರು ವೆಬ್‍ಸೈಟ್  ಅಥವಾ 1950 ಟೊಲ್ ಫ್ರೀ ಮತದಾರರ ಸಹಾಯ ಕೇಂದ್ರದ ಮೂಲಕವು ಪರಿಶೀಲಿಸಿ ಧೃಡೀಕರಿಸಿಕೊಳ್ಳಬಹುದು ಎಂದು ಹೇಳಿದರು.
    ಸಾರ್ವಜನಿಕರು ನಿಮ್ಮ ಹೆಸರು ಮತ್ತು ವಿವರಗಳನ್ನು ಮತದಾರರ ಪಟ್ಟಿಯಲ್ಲಿ ಇದೆಯೇ, ಪರಿಶೀಲಿಸಿಕೊಳ್ಳಿ ಇರದಿದ್ದಲ್ಲಿ, ನಗದಿತ ನಮೂನೆ-6ರಲ್ಲಿ ಹೆಸರು ಸೇರ್ಪಡೆ, ನಮೂನೆ-7ರಲ್ಲಿ ತೆಗೆದುಹಾಕಲು, ನಮೂನೆ-8ರಲ್ಲಿ ತಿದ್ದುಪಡಿ ಮತ್ತು ನಮೂನೆ-8ಎ ರಲ್ಲಿ ಒಂದುಸ್ಥಳ ದಿಂದ ಬೇರೆ ಸ್ಥಳಕ್ಕೆ ವರ್ಗಾಯಿಸಿಕೊಳ್ಳ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಹೇಳಿದರು.
ವ್ಯಾಪಕ ಪ್ರಚಾರ :
   ಮತದಾರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ ಕುರಿತಂತೆ ಚುನಾವಣಾ ಕಚೇರಿಯ ಅಧಿಕಾರಿಗಳೊಂದಿಗೆ ಇತರ ಎಲ್ಲ ಅಧಿಕಾರಿಗಳು ಕೈಜೋಡಿಸಬೇಕು. ಎಲ್ಲ ನಾಗರಿಕರು ಕೈಜೋಡಿಸಬೇಕು ವ್ಯಾಪಕ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸ್ವೀಪ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
   ಚುನಾವಣಾ  ತಹಶೀಲ್ದಾರ ಪ್ರಶಾಂತ ನಾಲವಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ನೇಹಾ ಜೈನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಕೃಷಿ ಜಂಟಿ ನಿರ್ದೇಶಕ ಮಂಜುನಾಥ್, ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಜಾಫರ ಸುತಾರ ಸ್ವಾಗತಿಸಿದರು. ವಯಸ್ಕರ ಶಿಕ್ಷಣಾಧಿಕಾರಿ ಎಂ.ಎಸ್.ಪಾಟೀಲ ವಂದಿಸಿದರು.
        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link