ಪೊಲೀಸರನ್ನು ಬಾಯಿಗೆ ಬಂದ ಹಾಗೆ ನಿಂದಿಸಿದವನ ಬಂಧನ.!

ಬೆಂಗಳೂರು

    ರಾಜ್ಯ ಪೊಲೀಸರ ಹೆಸರನ್ನು ಉಲ್ಲೇಖಿಸಿ ಅವಾಚ್ಯ ಪದಗಳಿಂದ ನಿಂದಿಸಿದ್ದ ಹೊಟೇಲ್ ಕಾರ್ಮಿಕನೊಬ್ಬನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

    ತುಮಕೂರು ಮೂಲದ ಮಲ್ಲೇಶ್ವರಂನ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್ ಬಂಧಿತ ಆರೋಪಿಯಾಗಿದ್ದಾನೆ ,ಮಹದೇಶ್ವರ ಬೆಟ್ಟಕ್ಕೆ ಹೊರಟಿದ್ದ ತನ್ನ ಬಳಿ ಹಣ ಕಸಿದಿದ್ದಾರೆ ಎಂದು ಅರೋಪಿಸಿ ಸೆಲ್ಫಿ ವಿಡಿಯೋ ಮಾಡಿ ಉಪ್ಪಾರಪೇಟೆ ಪೊಲೀಸರಿಗೆ ಬಾಯಿಗೆ ಬಂದಂತೆ ಅವಾಚ್ಯ ಶಬ್ದಗಳಿಂದ ಆರೋಪಿ ರಾಕೇಶ್ ಬೈದು ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಶೇರ್ ಮಾಡುವಂತೆ ಎಲ್ಲರನ್ನೂ ಕೇಳಿಕೊಂಡಿದ್ದನು.

    ಅದರಲ್ಲಿ ಕರ್ನಾಟಕ ಪೊಲೀಸರು ಸರಿಯಿಲ್ಲ. ಅವರು ಇರುವವರೆಗೂ ನಮ್ಮ ರಾಜ್ಯ ಉದ್ಧಾರ ಆಗುವುದಿಲ್ಲ. ಅವರು ಗಂಡಸರಲ್ಲ . ನಡು ರಸ್ತೆಯಲ್ಲಿ ಸುಟ್ಟು ಹಾಕಬೇಕು ಎಂದೆಲ್ಲಾ ನಿಂದಿಸಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಹೆಸರನ್ನು ಉಲ್ಲೇಖಿಸಿ, ಡಿಕೆಶಿ ಬಂಧಿಸಿರುವವರಿಗೆ ಬೂಟ್‌ನಲ್ಲಿ ಹೊಡೆಯುತ್ತೇನೆ ಎಂದು ಬೂಟ್ ತೋರಿಸಿದ್ದು, ಡಿಕೆಶಿ ಬಂಧನಕ್ಕೆ ಬಿಜೆಪಿ ಕಾರಣವಾಗಿದ್ದು ಮೊದಲು ಪೊಲೀಸರನ್ನು ಸರಿಯಾಗಿ ಇಟ್ಟುಕೊಳ್ಳಿ ಎಂದು ಕಿಡಿಕಾರಿದ್ದಾನೆ.

     ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಪೊಲೀಸರು ನನ್ನನ್ನು ನಿಂದಿಸಿ, ದಂಡ ಕಟ್ಟಿಸಿಕೊಂಡಿದ್ದರು. ಈ ಹಿನ್ನೆಲೆ ಪೊಲೀಸರಿಗೆ ನಿಂದಿಸಿದೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.ಆರೋಪಿ ಮಲ್ಲೇಶ್ವರಂನ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link