ತುಮಕೂರು : ಸಿದ್ದ ಗಂಗಾ ಮಠಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ರವರು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಬಂದು ಮಠದ ಆವರಣದಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ಪೂಜೆ ನೆರವೇರಿಸಿದರು.
ಇಂದಿನಿಂದ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಾಹ್ನ 01.20 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ.
ಮಧ್ಯಾಹ್ನ 2.15ಗಂಟೆಗೆ ಸಿದ್ದಗಂಗಾ ಮಠದಲ್ಲಿ ಡಾ.ಶಿವಕುಮಾರ್ ಸ್ವಾಮೀಜಿ ಅವರಿಗೆ ಸಂಬಂಧಿಸಿದ ವಸ್ತುಸಂಗ್ರಹಾಲಯ ಕಟ್ಟಡಕ್ಕೆ ಶಂಕು ಸ್ಥಾಪನೆಯನ್ನು ನೆರವೇರಿಸಿದರು. ನಂತರ ಸಿದ್ದಗಂಗಾ ಮಠದ ವತಿಯಿಂದ ಪ್ರಧಾನ ಮಂತ್ರಿಯವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ