ಸರ್ಕಾರಿ ಶಾಲೆಗಳು, ಅನುದಾನಿತ ಮತ್ತು ಖಾಸಗಿ ಶಾಲೆಗಳ ಪರಿಶೀಲನೆಗೆ ನ್ಯಾ. ಸಾಬಪ್ಪ ಭೇಟಿ

ದಾವಣಗೆರೆ

        ಇಂದು ದಾವಣಗೆರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಾಬಪ್ಪ ಇವರು ದಾವಣಗೆರೆ ತಾಲ್ಲೂಕು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಯವರ ವ್ಯಾಪ್ತಿಯಲ್ಲಿ ಇರುವ ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಹಾಗೂ ಖಾಸಗಿ ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿವೀಕ್ಷಿಸಿದರು.

         ಮಕ್ಕಳ ಹಾಜರಾತಿ ಸಂಖ್ಯೆ, ಕಲಿಕಾ ಪ್ರಗತಿ, ಶೌಚಾಲಯ, ಪ್ರಯೋಗಶಾಲೆ, ಸ್ಮಾರ್ಟ್ ಕ್ಲಾಸ್, ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳ ಬಗ್ಗೆ, ಗಣಕಯಂತ್ರ, ಸಾರಿಗೆ ಸೌಲಭ್ಯಗಳು, ಗ್ರಂಥಾಲಯ, ಮಕ್ಕಳಿಗೆ ಅಡುಗೆ ತಯಾರಿಸುವ ಕೊಠಡಿಗಳು ಹಾಗೂ ಸರ್ಕಾರದ ಅನುದಾನದ ಅಡಿಯಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ಮಾಡಿದರು.

         ಸರ್ಕಾರಿ ಶಾಲೆಯಲ್ಲಿ ಇರುವ ಮಕ್ಕಳ ಹಾಜರಾತಿ ಬಗ್ಗೆ ಹಾಗೂ ಪ್ರಗತಿಯ ಬಗ್ಗೆ ಸಹಾ ಮಾಹಿತಿ ಪಡೆದರು. ಸರ್ಕಾರಿ ಶಾಲೆಗಳಲ್ಲಿ ಸಹ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ಪ್ರತಿಯೊಬ್ಬ ಶಿಕ್ಷಕರ ಬಹದೊಡ್ಡ ಜವಾಬ್ದಾರಿಯಾಗಿರುವ ಬಗ್ಗೆ ಮನದಟ್ಟು ಮಾಡಿ ಅದರಂತೆ ಶಿಕ್ಷಣ ನೀಡಲು ಸಲಹೆ ನೀಡಿದರು.

       ಸರ್ಕಾರಿ ಶಾಲೆಗಳ ಪರಿಶೀಲನೆ ವೇಳೆಯಲ್ಲಿ ಮುಖ್ಯೋಪಾಧ್ಯಾಯರುಗಳು, ಶಿಕ್ಷಕರು ಮತ್ತು ಶಿಕ್ಷಕಿಯರು, ಸರ್ಕಾರಿ ಶಾಲೆಗಳ ಎಸ್.ಡಿ.ಎಂ.ಸಿ. ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಗೂ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಕೊಟ್ರಪ್ಪ ಹಾಜರಿದ್ದರು.
ಖಾಸಗಿ ಶಾಲೆಗಳ ಪರಿಶೀಲನೆ ಸಮಯದಲ್ಲಿ ಶಾಲೆಯ ಮುಖ್ಯೋಪಧ್ಯಾಯರು, ಶಿಕ್ಷಕರು, ಶಿಕ್ಷಕಿಯರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಸಹ ಹಾಜರಿದ್ದರು ಹಾಗೂ ಬಿ.ಇ.ಒ ಕಚೇರಿಯ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿಗಳಾದ ಸಾಬಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap