ಹಾವೇರಿ
ಹಾವೇರಿ ಜಿಲ್ಲಾ ಬಾಲಭವನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ದಿನಾಚರಣೆ ಅಂಗವಾಗಿ 5 ರಿಂದ 16 ವರ್ಷದ ಮಕ್ಕಳಿಗೆ ರಂಗೋಲಿ, ಚಿತ್ರಕಲೆ, ಕನ್ನಡ ಗೀತೆ ಹಾಗೂ ವೇಷಭೂಷಣ ಸ್ಪರ್ಧೆಗಳು ಗುರುವಾರ ನಗರದ ಜಿಲ್ಲಾ ಬಾಲಭವನದಲ್ಲಿ ಜರುಗಿದವು.
ಉದ್ಘಾಟಣೆ ನೆರವೇರಿಸಿದ ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಅಂದಾನಪ್ಪ ಎಮ್. ವಡಗೇರಿ ಅವರು ಮಾತನಾಡಿ, ಮಕ್ಕಳಲ್ಲಿನ ಸೂಕ್ತ ಪ್ರತಿಭೆಯನ್ನು ಹೊರಹಾಕಲು ಜಿಲ್ಲಾ ಬಾಲಭವನವು ಇಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದರ ಸದುಪಯೋಗವನ್ನು ಜಿಲ್ಲೆಯ ಮಕ್ಕಳು ಪಡೆದುಕೊಳ್ಳಬೇಕೆಂದು ಹೇಳಿದರು.
ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೂ ಪ್ರಮಾಣೊತ್ರ ವಿತರಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ .ಪಿ.ವಾಯ್.ಶೆಟ್ಟೆಪ್ಪನವರ ಹಾಗೂ ಹಿರಿಯ ಸಾಹಿತಿ ಗಂಗಾಧರ ನಂದಿ ಅವರು ಮಾತನಾಡಿದರು. ಕಾರ್ಯಕ್ರಮ ಸಂಯೋಜಕ ಸೋಮನಗೌಡ ಗಾಳಿಗೌಡ್ರ ನಿರೂಪಿಸಿದರು. ಸುರೇಶ ಬುಗುಟೆ ವಂದಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
