ಇಂದಿನಿಂದ ಉಪನ್ಯಾಸಕರ ನೇಮಕಾತಿಗೆ ಪರೀಕ್ಷೆ

ದಾವಣಗೆರೆ :

        ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸರ್ಕಾರಿ ಪದವಿ ಕಾಲೇಜುಗಳ ಉಪನ್ಯಾಸಕರ ನೇಮಕಾತಿ ಪರೀಕ್ಷೆಗಳು ನ.29ರಿಂದ ಡಿ.8ರವರೆಗೆ ನಡೆಯಲಿದ್ದು ಪರೀಕ್ಷಾ ಕರ್ತವ್ಯಕ್ಕೆ ನೇಮಕವಾಗಿರುವ ಅಧಿಕಾರಿಗಳು ಜಾಗರೂಕತೆಯಿಂದ ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ತಿಳಿಸಿದರು.

         ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

         ಪರೀಕ್ಷ್ಷೆಗೆ ನಿಯೋಜನೆಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ತಮ್ಮ ಯಾವುದೇ ಸಂದೇಹಗಳನ್ನು ಮೊದಲೇ ಪರಿಹರಿಸಿಕೊಳ್ಳಬೇಕು. ಕೆಲವು ಕಾಲೇಜುಗಳಲ್ಲಿ ಒಂದೇ ಸಮಯದಲ್ಲಿ ಪದವಿ ತರಗತಿಗಳ ಪರೀಕ್ಷೆಗಳು ಹಾಗೂ ನೇಮಕಾತಿ ಪರೀಕ್ಷೆಗಳು ನಡೆಯುತ್ತಿವೆ.

         ಏಕಕಾಲದಲ್ಲಿ ಎರಡೂ ಪರೀಕ್ಷೆಗಳನ್ನು ನಡೆಸುತ್ತಿರುವ ಕಾಲೇಜುಗಳ ಪ್ರಾಂಶುಪಾಲರು ಎರಡೂ ಪರೀಕ್ಷೆಗಳನ್ನು ಪ್ರತ್ಯೇಕವಾಗಿ ಆಯೋಜಿಸಬೇಕು. ಅದೇ ಕಾಲೇಜಿನ ಪರೀಕ್ಷಾ ವಿಷಯದ ಶಿಕ್ಷಕರು ಅಂದಿನ ವಿಷಯದ ಪರೀಕ್ಷ್ಷೆಗೆ ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸುವುದು ಬೇಡ ಹಾಗೂ ಪರೀಕ್ಷೆ ನಡೆಯುವ ದಿನಗಳಲ್ಲಿ ಬೇರೆ ತರಗತಿಗಳು ನಡೆಯುವುದು ಬೇಡ ಎಂದರು.

         ಪಿ.ಯು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶೇಖರಪ್ಪ ಮಾತನಾಡಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಆನ್‍ಲೈನ್ ಪಡೆದುಕೊಳ್ಳಬೇಕು ಹಾಗೂ ಪರೀಕ್ಷಾ ಕೇಂದ್ರಗಳ ಮಾಹಿತಿ ಆನ್‍ಲೈನ್ ಸಿಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಎಲ್ಲಾ ಮಾಹಿತಿ ಇರಲಿದ್ದು ಅಭ್ಯøರ್ಥಿಗಳು ಗಮನಿಸಬೇಕು ಎಂದರು.

        ಒಟ್ಟು 10 ದಿನಗಳ ಕಾಲ ಪರೀಕ್ಷೆಗಳು ಜರುಗಲಿವೆ. ಡಿ.8 ರಂದು 16 ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ವಿಧವಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.

        ಸಭೆಯಲ್ಲಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ವೇದಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ. ಶಿವಪ್ರಸಾದ್, ದೂಡ ಆಯುಕ್ತ ಆದಪ್ಪ, ಸಮಾಜ ಕಲ್ಯಾಣಾಧಿಕಾರಿ ಶಿವಾನಂದ್ ಕುಂಬಾರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಿರಿಯಣ್ಣ ಮತ್ತಿತರರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link