ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಆದ್ಯತೆ : ಪೂರ್ಣಿಮಾಶ್ರೀನಿವಾಸ್

ಹಿರಿಯೂರು :

         ಸದಾತೀವ್ರಬರಗಾಲಕ್ಕೆ ತುತ್ತಾಗಿ ಜನ-ಜಾನುವಾರು ರೈತರಿಗೆ ಸಂಕಷ್ಟ ಪರಿಸ್ಥಿತಿ ಸೃಷ್ಟಿಸುತ್ತಿರುವ ಈ ತಾಲ್ಲೂಕಿನಲ್ಲಿ ಶಾಶ್ವತ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂಬುದಾಗಿ ಶಾಸಕಿ ಪೂರ್ಣಿಮಾಶ್ರೀನಿವಾಸ್ ಹೇಳಿದರು.
ತಾಲ್ಲೂಕಿನ ಕಾಟನಾಯಕನಹಳ್ಳಿ ಬಳಿ ವೇದಾವತಿ ನದಿಗೆ ಅಡ್ಡಲಾಗಿ ಚೆಕ್‍ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

         ಗಡಿಭಾಗದಲ್ಲಿ ಮಳೆ-ಬೆಳೆ ಇಲ್ಲದೆ ಜನ ಸಂಕಷ್ಟದಲ್ಲಿದ್ದಾರೆ. ಸದಾ ಬರಗಾಲಕ್ಕೆ ತುತ್ತಾಗುವ ಈ ಭಾಗದ ಜನರಿಗೆ ಶಾಶ್ವತ ನೀರಾವರಿ ಯೋಜನೆ ಮತ್ತು ಮೂಲ ಸೌಲಭ್ಯ ಕಲ್ಪಿಸಲು ಹೆಚ್ಚು ಅನುದಾನ ನೀಡಲಾಗುವುದು ಎಂದರಲ್ಲದೆ, ನೀರನ್ನು ಮಿತವಾಗಿ ಬಳಸಿ ಪ್ಲೋರೈಡ್‍ಯುಕ್ತ ನೀರು ಸೇವನೆ ಮುಕ್ತಿಗಾಗಿ ತಾಲ್ಲೂಕಿನ ಪ್ರತಿ ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕ ಸ್ಥಾಪನೆ, ಮಳೆಗಾಲದಲ್ಲಿ ನೀರು ವ್ಯರ್ಥವಾಗದಂತೆ ಸಂರಕ್ಷಿಸಲು ಚೆಕ್‍ಡ್ಯಾಂ, ಒಡ್ಡು, ಬ್ಯಾರೇಜ್, ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿಮುಖಂಡ ಡಿ.ಟಿ.ಶ್ರೀನಿವಾಸ್, ನೀರಾವರಿ ಇಲಾಖೆ ಅಧಿಕಾರಿಗಳಾದ ಮಂಜುನಾಥ್, ವೀರಭದ್ರಯ್ಯ, ತಾಪಂ.ಸದಸ್ಯ ಜಯರಾಮಯ್ಯ, ಶಾಸಕರ ಆಪ್ತಸಹಾಯಕ ನಿರಂಜನ್‍ಮೂರ್ತಿ, ಚಿತ್ತಯ್ಯ, ಕೇಶವಮೂರ್ತಿ ಇತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap