ಸಚಿವ ಸಂಪುಟದಿಂದ ಸಚಿವ ಪುಟ್ಟರಂಗಶೆಟ್ಟಿಯನ್ನು ಕೈಬಿಡಲು ಆಗ್ರಹ

ಹೊಸಪೇಟೆ:

       ರಾಜ್ಯ ಸರಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಪುಟ್ಟರಂಗಶೆಟ್ಟಿ ಅವರ ಆಪ್ತ ಸಹಾಯಕ ಮೋಹನ್ ಎಂಬುವವರು ಲಕ್ಷಾಂತರ ರೂಪಾಯಿಗಳೊಂದಿಗೆ ಸಿಕ್ಕಿಬಿದ್ದ ಪ್ರಕರಣವನ್ನು ಕೂಡಲೇ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ತಾಲೂಕು ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

       ಸ್ಥಳೀಯ ರೋಟರಿ ವೃತ್ತದಲ್ಲಿ ಜಮಾಯಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯದಲ್ಲಿನ ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಹಾಗೂ ಸಚಿವ ಪುಟ್ಟರಂಗಶೆಟ್ಟಿ ವಿರುದ್ಧ ಘೋಷಣೆಗಳನ್ನು ಕೂಗಿದರು. ತೈಲ ಬೆಲೆ ಏರಿಸಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿದರು.

       ಸಚಿವರ ಆಪ್ತ ಸಹಾಯಕ ಲಕ್ಷಾಂತರ ರೂಗಳ ಕಂತೆ ಕಂತೆ ನೋಟುಗಳೊಂದಿಗೆ ವಿಧಾನಸೌಧದಲ್ಲಿ ಸಿಕ್ಕಿ ಬಿದ್ದಿದ್ದಾನೆ. ಇದನ್ನು ರಾಜ್ಯ ಸರಕಾರ ಮರೆಮಾಚಲು ಯತ್ನಿಸುತ್ತಿದೆ. ಈ ಪ್ರಕರಣವನ್ನು ಸಿಬಿಐಗೆ ನೀಡಿದಲ್ಲಿ ಸತ್ಯ ಬಯಲಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರಕಾರ ತನಿಖೆಗೆ ಒಪ್ಪಿಸದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. ಪೆಟ್ರೋಲ್, ಡಿಸೇಲ್ ಬೆಲೆಯನ್ನು ಕೇಂದ್ರ ಸರಕಾರ ಇಳಿಕೆಮಾಡಿದ. ಆದರೆ ರಾಜ್ಯ ಸರಕಾರ ದರ ಹೆಚ್ಚಿಸುವ ಮೂಲಕ ಜನವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ಪ್ರತಿಭಟನಾನಿರತರು ಕಿಡಿಕಾರಿದರು.

          ರಾಜ್ಯ ಸರಕಾರ ಕೂಡಲೇ ಸಚಿವ ಪುಟ್ಟರಂಗ ಶೆಟ್ಟಿಯನ್ನು ಸಚಿವ ಸಂಪುಟದಿಂದ ಹೊರಗಿಡಬೇಕು. ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಿಸಿರುವುದನ್ನು ಕೈಬಿಡಬೇಕು ಹಾಗೂ ಯಾವುದೇ ಕಾರಣಕ್ಕೂ ಹಂಪಿ ಉತ್ಸವ ಕೈಬಿಡಬಾರದು ಎಂದು ಆಗ್ರಹಿಸಿದರು.ಮುಖಂಡರಾದ ಅಶೋಕ್ ಜೀರೆ, ಗುದ್ಲಿ ಪರಶುರಾಮ, ಕಟಗಿ ರಾಮಕೃಷ್ಣ, ಅನಂತ ಪದ್ಮನಾಭ ಸ್ವಾಮಿ, ಬಸವರಾಜ ನಾಲತ್ವಾಡ್, ಶಂಕರ ಮೇಟಿ ಸೇರಿದಂತೆ ಮುಂತಾದವರು ಇದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link