ಕೇಂದ್ರದ ಆರ್ಥಿಕ ನೀತಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ..!

ಚಿತ್ರದುರ್ಗ

     ಕೇಂದ್ರ ಸರ್ಕಾರದ ಜನವಿರೋಧಿ ಪ್ರವೃತ್ತಿಯನ್ನು ಕೈಬಿಟ್ಟು ದೇಶದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಲು ದೇಶದ ಬಡತನ, ನಿರುದ್ಯೋಗ ಮುಂತಾದ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರಕ್ಕೆ ಸೂಕ್ತ ಸೂಚನೆ ನೀಡುವಂತೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿಯನ್ನು ಜಿಲ್ಲಾ ಕಾಂಗ್ರೇಸ್ ಸಮಿತಿ ಇಂದು ಸಲ್ಲಿಸಿತು.

    ಜಿಲ್ಲಾ ಕಾಂಗ್ರೆಸ್ ಅದ್ಯಕ್ಷ ಎಂ.ಕೆ.ತಾಜ್‍ಪೀರ್ ಅವರ ನೇತೃತ್ವದಲ್ಲಿ ಜಮಾಯಿಸಿದ್ದ ನೂರಾರು ಮಂದಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ವೃತ್ತದಲ್ಲಿ ಪ್ರತಿಭಟಿಸಿದರು. ಕೇಂದ್ರ ಸರ್ಕಾರ ಅನುಸರಿಸುತ್ತಿರುವ ನೀತಿಯನ್ನು ಖಂಡಿಸಿದರು

    ಚುನಾವಣೆಯಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬರಬೇಕಾದರೆ, ರಾಷ್ಟ್ರದ ಜನತೆಗೆ ನೀಡಿದ್ದ ಯಾವ ಭರವಸೆಯೂ ಈಡೇರಿಲ್ಲ. ತಮಗೆ ಅಧಿಕಾರ ನೀಡಿದರೆ ವಿಧೇಶಗಳಲ್ಲಿರವ ಕಪ್ಪುಹಣ ವಾಪಸ್ ತರುತ್ತೇವೆಂದು ಹಾಗೂ ಪ್ರತಿಯೊಬ್ಬ ಭಾರತೀಯ ಪ್ರಜೆಗಳ ಅಕೌಂಟಿಗೆ 15 ಲಕ್ಷ ರೂಪಾಯಿಗಳನ್ನು ಹಾಕುತ್ತೇವೆಂದು ಆಶ್ವಾಸನೆ ನೀಡಿದ್ದರು.. ಪೆಟ್ರೋಲ್ ಬೆಲೆ, ಡೀಸಲ್ ಬೆಲೆ, ಗ್ಯಾಸ್ ಬೆಲೆ ಹಾಗೂ ದಿನೋಪಯೋಗಿ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡುತ್ತೇವೆಂದು ಭರವಸೆ ನೀಡಿದ್ದರು ಹಾಗೆಯೇ ನಿರುದ್ಯೋಗಿಗಳಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವಂದು ಹೇಳಿದ್ದರು, ಆದರೆ ಮೋದಿ ಅವರು ದೇಶದ ಜನರಿಗೆ ಕೊಟ್ಟ ಮಾತುಗಳನ್ನು ಉಳಿಸಿಕೊಂಡಿಲ್ಲವೆಂದು ದೂರಿದರು

   2019ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ರಾಷ್ಟ್ರದ ರಕ್ಷಣೆಯಂತಹ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು, ಮೇಲ್ವರ್ಗದ ಜನರಿಗೆ ಶೇ.10ರ ಮೀಸಲಾತಿ, ತ್ರಿಬಲ್ ತಲಾಕ್ ರದ್ದುಪಡಿಸುವುದು, ಧರ್ಮ-ಧರ್ಮ, ಜಾತಿ-ಜಾತಿಗಳನ್ನು ಒಡೆದು ಆಳುವ ಪ್ರಯತ್ನ ಮಾಡುವುದು, ರಾಮ ಮಂದಿರ, ಮಸೀದಿಯಂತಹ ಅನೇಕ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಪುನಃ ಅಧಿಕಾರಕ್ಕೆ ಬಂದು ದೇಶದ ನಿರುದ್ಯೋಗ, ಬಡತನ, ಸಾಮರಸ್ಯ, ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಯಾವುದೇ ವಿಧವಾದಂತಹ ಮಹತ್ವದ ಕಾರ್ಯಕ್ರಮಗಳನ್ನು ನೀಡಿಲ್ಲ. ಈ ಸರ್ಕಾರದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಆರೋಪಿಸಿದರು

    ಕೇಂದ್ರ ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ರಾಷ್ಟ್ರದ ಜಿ.ಡಿ.ಪಿ. ಶೇಕಡ 6ಕ್ಕಿಂತಲೂ ಕಡಿಮೆಗೆ ಕುಸಿದಿದೆ. ಡಾಲರ್ ಎದುರು ರೂಪಾಯಿ ಮೌಲ್ಯ 72ರ ಗಡಿ ದಾಟಿದೆ. ಆಟೋಮೊಬೈಲ್ ಕ್ಷೇತ್, ಬೈಸಿಕಲ್ ಕೈಗಾರಿಕೆಗಳು, ಸಣ್ಣ ಸಣ್ಣ ಕೈಗಾರಿಕೆಗಳಲ್ಲಿ ಉದ್ಯೋಗಗಳು ಕಡಿತಗೊಂಡು ಕೋಟ್ಯಾಂತರ ಉದ್ಯೋಗಿಗಳು ಉದ್ಯೋಗ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ನಿರುದ್ಯೋಗ ಶೇಕಡ 8.1 ರಷ್ಟು ಹೆಚ್ಚಾಗಿದೆ ಎಂದು ದೂರಿದರು.

    ರಾಷ್ಟ್ರದಲ್ಲಿ ಅತಿವೃಷ್ಟಿ, ಅನಾವೃಷ್ಟಿ ಉಂಟಾಗಿ ಜನರ ಬದುಕು ದುಸ್ತರವಾಗಿದೆ. ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ, ಮಾರುಕಟ್ಟೆಯಲ್ಲಿ ಸಿಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಏಷಿಯಾದ ಪೆಸಿಫಿಕ್ ಭಾಗದ 16 ರಾಷ್ಟ್ರಗಳು ಖಅಇP ಒಡಂಬಡಿಕೆ ಮಾಡಿಕೊಂಡು ಸುಮಾರು 15000 ಪದಾರ್ಥಗಳ ಪೈಕಿ 12000 ಪದಾರ್ಥಗಳು ಈ 16 ರಾಷ್ಟ್ರಗಳ ಮಾರುಕಟ್ಟೆಯಲ್ಲಿ ಆಮದು ಸುಂಕ ಇಲ್ಲದೆ ಮಾರಾಟ ಮಾಡಲು ಅವಕಾಶ ಕೊಡಲು ಮುಂದಾಗಿರುವುದು ರಾಷ್ಟ್ರದ ಕೃಷಿಕರ, ಕಾರ್ಮಿಕರ, ಸಣ್ಣ ಉದ್ದಿಮೆದಾರರ, ವ್ಯಾಪಾರಸ್ಥರ ಮೇಲೆ ಚಪ್ಪಡಿಕಲ್ಲು ಎಳೆಯುವ ಪ್ರಯತ್ನ ನಡೆದಿದೆ ಎಂದು ಟೀಕಿಸಿದರು

     ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡರಾದ ಕೆಪಿಸಿಸಿ ಪ್ರಧಾನ ಕಾರ್ಯದಶೀ ಶ್ರೀಮತಿ ಮಂಜುಳ ನಾಯ್ಡು, ಶಾಸಕ ರಘುಮೂರ್ತಿ, ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‍ಪೀರ್. ಕಾರ್ಯಧ್ಯಕ್ಷ ಶಿವುಯಾದವ್, ಮಾಜಿ ಶಾಸಕ ಎ.ವಿ.ಉಮಾಪತಿ, ಆರ್.ಕೆ.ನಾಯ್ಡ, ತಿಪ್ಪೇಸ್ವಾಮಿ ಮೋಕ್ಷಾ ರುದ್ರಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap