ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಪ್ರತಿಭಟನೆ..!

ಮಧುಗಿರಿ

     ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ , ವಿದ್ಯುತ್ ಕಾಯ್ದೆ , ಬೀಜ ಕಾಯ್ದೆ ತಿದ್ದುಪಡಿ , ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸಿರುವುದನ್ನು ಹಾಗೂ ರೈತ ಪರ ನೀತಿಗಳಿಗಾಗಿ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಡಾ.ಜಿ.ವಿಶ್ವನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

    ಪಟ್ಟಣದ ಪುರಸಭಾ ಆವರಣದಿಂದ ತಾಲ್ಲೂಕು ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಈಗಿರುವ ಎ.ಪಿ.ಎಂ.ಸಿ ಮಾರುಕಟ್ಟೆ ವ್ಯವಸ್ಥೆಯನ್ನು ನಾಶ ಮಾಡಿ ಖಾಸಗಿ ಕಂಪನಿಗಳು ಯಾವ ದರಕ್ಕೆ ಬೇಕಾದರೂ ಕೃಷಿ ಉತ್ಪನ್ನಗಳನ್ನ ಖರೀದಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಇದನ್ನು ವಿರೋಧಿಸಿ ಸೆ.21ರಂದು ರಾಜ್ಯದಾದ್ಯಂತ ರೈತ ಸಂಘಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತಿದ್ದು, ಈ ಪ್ರತಿಭಟನೆಗೆ ಎಲ್ಲಾ ರೈತರು ಭಾಗವಹಿಸುವಂತೆ ಕರೆ ನೀಡಿದರು.

   ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಶಾಸಕ ಎಂ.ವಿ.ವೀರಭದ್ರಯ್ಯ, ರೈತರ ಪ್ರತಿಭಟನೆಗೆ ನನ್ನ ಸಂಪೂರ್ಣ ಬೆಂಬಲವಿದೆ. ಭೂಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನ್ಯಾಯವಾಗಲಿದ್ದು, ಇದನ್ನು ತೀವ್ರವಾಗಿ ಖಂಡಿಸಲಾಗುವುದು ಎಂದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಕಿಡಿ ಕಾರಿದರು.

    ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಸಿ.ಶಂಕರಪ್ಪ ಸಂಘಟನಾ ಕಾರ್ಯದರ್ಶಿ ಗೋವಿಂದರಾಜು, ರೈತ ಮುಖಂಡರಾದ ಯತಿರಾಜು, ನಾಗರತ್ನಮ್ಮ, .ಕೆ.ಲಕ್ಷ್ಮಣ್ ಗೌಡ, ಕೆಂಚಪ್ಪ, ಸಿ.ಜೆ.ಲೋಕೇಶ್, .ಆರ್.ರಾಜಶೇಖರ್, ಚಿನ್ನಪ್ಪ ರೆಡ್ಡಿ, ರಾಮೇಗೌಡ, ಟಿ.ಡಿ.ಹನುಮಂತರಾಯಪ್ಪ, ನಾಗರಾಜು, ಭಾಗ್ಯಮ್ಮ, ಲಲಿತಮ್ಮ, ಓಂಪ್ರಕಾಶ್, ರಾಮಕೃಷ್ಣಪ್ಪ ಹಾಗೂ ಇನ್ನಿತರರು ಭಾಗವಹಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link