ಬೆಂಗಳೂರು:
ರಾಷ್ಟ್ರದ ಉನ್ನತ ಮಟ್ಟದ ತನಿಖಾ ಸಂಸ್ಥೆ ಸಿಬಿಐನಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿ, ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.
ನಗರದ ಹೆಬ್ಬಾಳದಲ್ಲಿರುವ ಸಿಬಿಐ ಕಚೇರಿ ಮುಂಭಾಗ ಸೇರಿದ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು, ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದ ಸಿಬಿಐನಲ್ಲಿ ಹಸ್ತಕ್ಷೇಪ ನಡೆಸಿರುವ ಕೇಂದ್ರ ಸರ್ಕಾರ ಅವ್ಯವಹಾರದಿಂದ ಪಾರಾಗಲು ಯತ್ನಿಸಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ರಜೆ ಮೇಲೆ ಕಳುಹಿಸಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯ ನೇತೃತ್ವವಹಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ರಾಷ್ಟ್ರದ ವಿಶ್ವಾಸಾರ್ಹತೆ ಸಂಸ್ಥೆಯಾಗಿದ್ದ ಸಿಬಿಐ ಅನ್ನು, ಕೇಂದ್ರದ ಮೋದಿ ಸರ್ಕಾರ ಹಾಳು ಮಾಡಿದಲ್ಲದೆ, ದುರ್ಬಲಗೊಳಿಸಿದೆ. ಅಷ್ಟೇ ಅಲ್ಲದೆ, ಸಾಮಾನ್ಯ ಜನರು ಸೇರಿದಂತೆ ಎಲ್ಲರು ಈ ಸಂಸ್ಥೆ ಮೇಲೆ ಅಪಾರ ನಂಬಿಕೆ ಇಟ್ಟಿದ್ದರು. ಆದರೆ, ಪ್ರಧಾನಿ ನರೇಂದ್ರ ಮೋದಿ ಹಸ್ತಕ್ಷೇಪ ದಿಂದ ನಂಬಿಕೆ ಹುಸಿಯಾಗಿದೆ ಎಂದು ದೂರಿದರು.
ರಫೆಲ್ ಹಗರಣ ದಾಖಲೆ ಪರಿಶೀಲಿನೆಯನ್ನು ಸಿಬಿಐ ಮಾಡುತ್ತಿತ್ತು. ಆದರೆ, ಈ ಹಗರಣ ಬೆಳೆಕಿಗೆ ಬರುವ ಕಾರಣದಿಂದಾಲೇ, ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ನಿರ್ದೇಶಕ ಅಲೋಕ್ ವರ್ಮಾ ಹಾಗೂ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಆಸ್ತಾರನ್ನು ಸರ್ಕಾರ ರಜೆ ಮೇಲೆ ಕಳುಹಿಸಿದೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಬ್ಯೂರೋ
ಸಿಬಿಐನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಬದಲಿಗೆ ಬಿಜೆಪಿ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಆಗಿದೆ. ಇದು ದುರದೃಷ್ಟಕರ ಕೂಡಲೇ ತನಿಖಾ ಸಂಸ್ಥೆಯ ಘನತೆ ಕಾಪಾಡಲು ದಕ್ಷ ಅಧಿಕಾರಿಗಳ ಸೇವೆಯನ್ನು ಮುಂದುವರೆಸಿ ಎಲ್ಲಾ ಪ್ರಕರಣಗಳನ್ನು ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಹಿನ್ನಲೆಯಲ್ಲಿ ಸಿಬಿಐ ಕಚೇರಿ ಸುತ್ತಮುತ್ತ ಬೀಗಿ ಪೆÇಲೀಸ್ ಬಂದೋಬಸ್ತ್ ಮಾಡಿ, ಪೆÇಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು.ಇನ್ನೂ, ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರು ಕಚೇರಿ ಆವರಣಕ್ಕೆ ಪ್ರವೇಶ ಮಾಡದಂತೆ ತಡೆದರು.ಪ್ರತಿಭಟನೆಯಲ್ಲಿ ಶಾಸಕಿ ಸೌಮ್ಯ ರೆಡ್ಡಿ, ಮಾಜಿ ಸಭಾಪತಿ ಬಿ.ಎಲ್.ಶಂಕರ್, ಕಾಂಗ್ರೆಸ್ ಮುಖಂಡರಾದ ಮನೋಹರ್, ಸಲೀಂ, ಜನಾರ್ದನ ಸೇರಿದಂತೆ ಪ್ರಮುಖರಿದ್ದರು.
ಸಚಿವರ ಗೈರು
ಸಿಬಿಐ ಸಂಘರ್ಷ ಹಾಗೂ ಮೋದಿ ಸರ್ಕಾರದ ಹಸ್ತಕ್ಷೇಪ ವಿರೋಧಿಸಿ ನಡೆಸಿದ ಪ್ರತಿಭಟನೆನಲ್ಲಿ ಭಾಗವಹಿಸಲು ರಾಜ್ಯ ಕಾಂಗ್ರೆಸ್‍ನ ಹಲವು ನಾಯಕರು ಹಿಂದೇಟು ಹಾಕಿರುವುದು ಕಂಡುಬಂತು. ಸ್ವತಃ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಜರಾದರೂ ಸಂಸದರಾಗಲಿ, ಸಚಿವರಾಗಲಿ, ಶಾಸಕರಾಗಲಿ ಇತ್ತ ತಲೆ ಹಾಕಲಿಲ್ಲ.ಇನ್ನೂ, ಉಸ್ತುವಾರಿಯೂ ಸಹ ಹತ್ತೇ ನಿಮಿಷದಲ್ಲಿ ಹೊರಟು ಹೋದರು.
ಸಿಬಿಐ ನಿಷ್ಕ್ರಿಯ ಕಾನೂನು ಹೋರಾಟ: ಕೇಂದ್ರೀಯ ತನಿಖಾ ದಳ(ಸಿಬಿಐ)ಯನ್ನು ಕೇಂದ್ರದ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ನಿಷ್ಕ್ರಿಯಗೊಳಿಸಿದ್ದು ಇದರ ವಿರುದ್ಧ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೊರೆ ಹೋಗಿ ಕಾನೂನು ಹೋರಾಟ ಮಾಡಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಮೋದಿ ಸರ್ಕಾರ ಸಿಬಿಐಅನ್ನು ದುರ್ಬಲಗೊಳಿಸುತ್ತಿದೆ. ರಾತ್ರೋರಾತ್ರಿ ಸಿಬಿಐ ನಿರ್ದೇಶಕರನ್ನು ಬದಲಾಯಿಸಿದ್ದು, ಮೊದಲ ಹಾಗೂ ಎರಡನೇ ಸ್ಥಾನದ ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಮೂರನೇ ಸ್ಥಾನದ ಅಧಿಕಾರಿಗೆ ಹಂಗಾಮಿ ನಿರ್ದೇಶಕ ಸ್ಥಾನ ನೀಡಲಾಗಿದೆ. ರಾತ್ರಿಯೇ ಹತ್ತು ಮಂದಿ ಸಿಬಿಐ ಉನ್ನತಾಧಿಕಾರಿಗಳನ್ನು ವರ್ಗಾವಣೆಗೊಳಿಸುತ್ತಾರೆ. ಸಿಬಿಐ ಇತಿಹಾಸದಲ್ಲಿ ಇಂತಹ ಘಟನೆ ಎಂದೂ ನಡೆದಿರಲಿಲ್ಲ.
ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಸಿಬಿಐ ಸಂಸ್ಥೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರದ ನೀತಿ ಸರಿಯಲ್ಲ. ಸಿಬಿಐ ಬಗ್ಗೆ ಕೇಂದ್ರ ಕೈಗೊಂಡ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲಿದ್ದೇವೆ. ಎಲ್ಲ ರೀತಿಯ ಕಾನೂನು ಹೋರಾಟ ನಡೆಸುತ್ತೇವೆ. ಸಿಬಿಐ ಸ್ವಾಯತ್ತ ಸಂಸ್ಥೆ. ಇದರ ಆಡಳಿತದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು. ನಾವು ಈ ವಿಷಯವನ್ನು ಜನರ ಬಳಿಗೂ ಕೊಂಡೊಯ್ಯುತ್ತೇವೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
