ಹರಪನಹಳ್ಳಿ:
ಕೇಂದ್ರ ಸರ್ಕಾರವು 2003ರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವುದನ್ನು ವಿರೋಧಿಸಿ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಈ ವೇಳೇ ತಾಲೂಕು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಧ್ಯಾಮಜ್ಜಿ ಹನುಮಂತಪ್ಪ ಮಾತನಾಡಿ ಕೇಂದ್ರ ಸರ್ಕಾರವು 2003ರ ವಿದ್ಯುತ್ ಕಾಯ್ದೆಯನ್ನು ತಿದ್ದುಪಡಿ ಮಾಡಿ, 2020ರ ವಿದ್ಯುತ್ ಕರಡು ಪ್ರತಿಯನ್ನು ಪ್ರಕಟಿಸಿದ್ದಾರೆ ಇದನ್ನು ರೈತ ಸಂಘ ವಿರೋಧಿಸುತ್ತದೆ ಎಂದ ಅವರು ಪ್ರಾಥಮಿಕ ತಿದ್ದುಪಡಿಯಿಂದಾಗಿ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಹುನ್ನಾರವಾಗಿದ್ದು ಕೂಡಲೇ ಸರ್ಕಾರ ವಿದ್ಯುತ್ ತಿದ್ದುಪಡಿ ಕಾಯ್ದೆಯನ್ನು ಕೈಬಿಟ್ಟು 2003ರ ಕಾಯ್ದೆಯನ್ನು ಮುಂದುವರೆಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಾಲೂಕು ರೈತ ಸಂಘದ ಮುಖಂಡರಾದ ಹೆಚ್.ಚನ್ನಬಸಪ್ಪ, ಜಿ.ಶಿವಕುಮಾರ, ಜಿ.ಸಿದ್ದಪ್ಪ, ಆಲೂರು ಶ್ರೀನಿವಾಸ, ಬಾಣದ ಗಂಗಪ್ಪ, ಗಿಡ್ಡಹಳ್ಳಿ ನಾಗರಾಜ, ಹುಚ್ವವ್ವನಹಳ್ಳಿ ಮಂಜುನಾಥ, ಯಲ್ಲಜ್ಜಿ ಹನುಮಂತಪ್ಪ, ಇತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ