ವಿಲೀನವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ

ಬೆಂಗಳೂರು

         ಬ್ಯಾಂಕ್ ಆಫ್ ಬರೋಡಾ, ದೇನಾ ಬ್ಯಾಂಕ್ ಹಾಗೂ ವಿಜಯ ಬ್ಯಾಂಕ್‍ಗಳ ವಿಲೀನವನ್ನು ವಿರೋಧಿಸಿ ಬೀದಿಗಿಳಿದಿರುವ ಬ್ಯಾಂಕ್ ಅಧಿಕಾರಿಗಳು ಹಾಗು ನೌಕರರು ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

         ಮೈಸೂರು ಬ್ಯಾಂಕ್ ವೃತ್ತದ ಬಳಿ ಸೇರಿದ ಸಾವಿರಾರು ಬ್ಯಾಂಕ್ ಅಧಿಕಾರಿಗಳು ಹಾಗು ನೌಕರರು ಬ್ಯಾಂಕ್‍ಗಳನ್ನು ವಿಲೀನಗೊಳಿಸುವುದನ್ನು ಕೈ ಬಿಡಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಬ್ಯಾಂಕ್‍ಗಳ ವಿಲೀನವನ್ನು ಮೊದಲಿನಿಂದಲೂ ವಿರೋಧಿಸುತ್ತಿದ್ದರೂ ಬ್ಯಾಂಕ್ ಆಫ್ ಬರೋಡಾ, ದೇನಾ ಬ್ಯಾಂಕ್ ಮತ್ತು ವಿಜಯ ಬ್ಯಾಂಕ್‍ಗಳ ವಿಲೀಣಕ್ಕೆ ಕೇಂದ್ರ ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

          ರಾಷ್ಟ್ರೀಕೃತ ಬ್ಯಾಂಕಿಂಗ್ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಬೇಕು. ಇನ್ನಷ್ಟು ವಿಸ್ತಾರಗೊಳಿಸಬೇಕು ಎಂಬ ಬೇಡಿಕೆಗಳಿಗೆ ವಿರುದ್ಧವಾಗಿ ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಇನ್ನಷ್ಟು ಸಂಕುಚಿತಗೊಳಿಸಲು ಹುನ್ನಾರ ನಡೆಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

          ಎಸ್‍ಬಿಐ ಜೊತೆಗೆ ಐದು ಸಹವರ್ತಿ ಬ್ಯಾಂಕ್‍ಗಳನ್ನು ವಿಲೀನಗೊಳಿಸಿದ್ದರಿಂದ 2017ಕ್ಕೆ ಇದ್ದ ? 1,77,000 ನಷ್ಟದ ಪ್ರಮಾಣವು 2018ಕ್ಕೆ ? 2,25,000 ಕೋಟಿಗೆ ಏರಿಕೆಯಾಗಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

        ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ ಸಂಚಾಲಕ ಎಚ್.ವಿ.ರೈ ಮಾತನಾಡಿದೊಡ್ಡ ಬ್ಯಾಂಕ್ ಹೆಚ್ಚು ಅಪಾಯಕಾರಿಯಾಗಿದೆ. ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ 8,95,600 ಕೋಟಿ ವಸೂಲಾಗದ ಸಾಲ (ಎನ್.ಪಿ.ಎ) ಇದೆ. ಸಾಲವನ್ನು ವಸೂಲಿ ಮಾಡಲು ಕ್ರಮ ಕೈಗೊಳ್ಳಲು ಆಸಕ್ತಿ ವಹಿಸುವುದರ ಬದಲು ಅನಗತ್ಯವಾಗಿ ಬ್ಯಾಂಕ್‍ಗಳ ವಿಲೀನ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿದೆ. ಇದು ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯೇ ಅಪಾಯಕ್ಕೆ ಸಿಲುಕುವಂತಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

           ಸರ್ಕಾರ ಸುಸ್ತಿ ಸಾಲ ವನ್ನು ಮರು ಪಾವತಿಸುವಂತಹ ಕ್ರಮವನ್ನು ಜಾರಿ ಮಾಡುವ ಬದಲು, ವಿಲೀನ ಪ್ರಕ್ರಿಯೆಗೆ ಕೈ ಹಾಕಿದೆ ಯತಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಆಗ್ರಹಿಸಿದರು.

ಗ್ರಾಹಕರ ಪರದಾಟ

         ಮುಷ್ಕರದಿಂದ ಹಲವು ಎಟಿಎಂಗಳಲ್ಲಿ ನಗದು ಅಭಾವಉಂಟಾಗಿ ವ್ಯಾಪಾರಿಗಳಿಗೆ ಚಿಲ್ಲರೆ ಕೊರತೆ ಉಂಟಾಯಿತು.ಮಂಗಳವಾರ ಕ್ರಿಸ್‍ಮಸ್ ರಜೆ ನೌಕರರ ಧರಣಿಯಿಂದ ಬುಧವಾರ ಸರ್ಕಾರಿ ಸ್ವಾಮ್ಯದ ಬ್ಯಾಂಕ್‍ಗಳು ತಮ್ಮ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲ ನೀಡಿದ್ದವು. ಆನ್‍ಲೈನ್ ಹೊರತುಪಡಿಸಿ ಆಫ್‍ಲೈನ್ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಆಯಿತು.

        ಕಳೆದ ಶಕ್ರವಾರ ಬ್ಯಾಂಕ್‍ಗಳ ವಿಲೀನ ಹಾಗೂ ವೇತನ ಪರಿಷ್ಕರಣೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಒಕ್ಕೂಟ ಸಂಘಟನೆಗಳು ಮುಷ್ಕರ ನಡೆಸಿದ್ದವು. ಮುಷ್ಕರ, ಸಾಲು- ಸಾಲು ರಜೆಗಳಿಂದ ಸಣ್ಣ- ಪುಟ್ಟ ವ್ಯಾಪಾರಸ್ಥರು, ಬೀದಿ ಬದಿ ವರ್ತಕರು,ವಾಹನ ಮಾಲೀಕರು, ಗ್ರಾಮೀಣ ಭಾಗದ ರೈತರು ನಗದು ಇಲ್ಲದೆ ಪರದಾಡುವಂತಾಯಿತು. ಪ್ರತಿಭಟನೆ ಬಗ್ಗೆ ತಿಳಿಯದೇ ಹಳ್ಳಿಗಳಿಂದ ಪಟ್ಟಣಕ್ಕೆ ಬಂದಿದ್ದ ಬ್ಯಾಂಕ್ ಗ್ರಾಹಕರು ಹಿಡಿಶಾಪ ಮನೆಯ ದಾರಿ ಹಿಡಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap