ನೋ ಹೆಲ್ಮೆಟ್ ನೋ ಪೆಟ್ರೋಲ್ ಗೆ ಸವಾರರ ವಿರೋಧ..!!

ಬೆಂಗಳೂರು

     ರಸ್ತೆ ಅಪಘಾತಗಳ ಬಗ್ಗೆ ಜಾಗೃತಿ ಮೂಡಿಸಲು ಸೋಮವಾರದಿಂದ ನಗರದಲ್ಲಿ “ನೋ ಹೆಲ್ಮೆಟ್ ನೋ ಪೆಟ್ರೋಲ್” ಎನ್ನುವ ಹೊಸ ನಿಯಮ ಜಾರಿಗೆ ಬರಲಿದ್ದು ಇದಕ್ಕೆ ಕೆಲವು ದ್ವಿಚಕ್ರ ವಾಹನ ಸವಾರರು ವಿರೋಧ ವ್ಯಕ್ತಪಡಿಸಿದ್ದಾರೆ.

       ನಗರ ಸಂಚಾರ ಪೊಲೀಸರು ಜಾರಿಗೆ ತರುವ ಈ ನಿಯಮ ಒಳ್ಳೆಯದು. ಆದರೆ ಬಂಕ್ ಪಕ್ಕದಲ್ಲಿ ಮನೆ ಇದ್ದರೂ ಹೆಲ್ಮೆಟ್ ಹಾಕಿಕೊಂಡು ಬರಬೇಕೇ ಎಂದು ಪ್ರಶ್ನಿಸುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.ಸಂಚಾರ ವಿಭಾಗದ ಹೆಚ್ಚುವರಿ ಪೆÇಲೀಸ್ ಆಯುಕ್ತರಾದ ಪಿ.ಹರಿಶೇಖರನ್ ಹೊಸ ನಿಯಮ ಜಾರಿ ಸಂಬಂಧ ಸಹಕಾರ ಕೋರಿ ಇಂಧನ ಕಂಪನಿಗಳ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ತಿಳಿಸಿದ್ದರು.

        ಆದರೆ ಅವರ ಕಡೆಯಿಂದ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ ಎನ್ನಲಾಗಿದೆ. ಕಳೆದ ವರ್ಷ ಬೈಕ್ ಅಪಘಾತಗಳಲ್ಲಿ ಸುಮಾರು 150 ಮಂದಿ ದುರ್ಮರಣಕ್ಕೀಡಾಗಿದ್ದರು. ದಂಡ ವಿಧಿಸುತ್ತಿದರೂ ಹೆಲ್ಮೆಟ್ ಬಳಸದೇ ವಾಹನ ಚಲಾಯಿಸುವವರ ಸಂಖ್ಯೆ ಕಡಿಮೆಯಾಗದಿದ್ದರಿಂದ, ಈ ನೂತನ ನಿಯಮ ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ.

      ಈಗಾಗಲೇ ಕೇರಳ, ಆಂಧ್ರ ಸೇರಿದಂತೆ ದೇಶದ ವಿವಿಧೆಡೆ ಈ ನಿಯಮ ಜಾರಿಯಾಗಿದೆ. ಇದರ ಪ್ರಕಾರ ನಿಮ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಬೇಕು ಎಂದರೆ ಹೆಲ್ಮೆಟ್ ಇರಲೇಬೇಕು. ಒಂದು ವೇಳೆ ನಿಮ್ಮ ಬಳಿ ಹೆಲ್ಮೆಟ್ ಇಲ್ಲ ಎಂದರೆ ಬಂಕ್‍ನವರು ನಿಮ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕುವುದಿಲ್ಲ.ಈ ನಿಯಮ ಒಳ್ಳೆಯದು. ಆದರೆ ಮೊದಲು ಪೊಲೀಸರು ಅವರು ಕೆಲಸವನ್ನು ಅವರು ಸರಿಯಾಗಿ ಮಾಡಲಿ. ಬಂಕ್ ಪಕ್ಕದಲ್ಲಿ ಮನೆ ಇದ್ದರೂ ಹೆಲ್ಮೆಟ್ ಹಾಕಿಕೊಂಡು ಬರಬೇಕೇ ಎಂದು ಪ್ರಶ್ನಿಸುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link