ಅತ್ಯಾಚಾರ ಖಂಡಿಸಿ ಡೀಸಿ ಕಚೇರಿ ಮುಂದೆ ಪ್ರತಿಭಟನೆ

ತುಮಕೂರು

    ನಗರದ ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಜನ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.
ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸುವ ಬಿತ್ತಿಪತ್ರ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

    ನಗರದ ಈದ್ಗಾ ಮೊಹಲ್ಲಾ ಬಡಾವಣೆಯಲ್ಲಿ ಈ ತಿಂಗಳ 5ರಂದು 52 ವರ್ಷದ ನರ್ಸುಲ್ಲಾ ಖಾನ್ ಎಂಬಾತ ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದು ಈ ಸಂಬಂಧ ತಿಲಕ್ ಪಾರ್ಕ್ ಠಾಣೆ ಪೊಲೀಸರು ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿ ಬಂಧಿಸಿದ್ದರು, ಆರೋಪಿ ಈಗ ಜೈಲಿನಲ್ಲಿದ್ದಾನೆ. ಈ ಘಟನೆಯಿಂದ ಸದರಿ ಬಾಲಕಿ ಮತ್ತು ಕುಟುಂಬದವರು ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದಾರೆ.

    ಆದ್ದರಿಂದ ಸದರಿ ಬಾಲಕಿ ಮತ್ತು ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು. ಆರೋಪಿಗೆ ಯಾವುದೇ ರೀತಿಯ ಕರುಣೆ, ದಯೆ ತೋರದೆ ಕಠಿಣ ಕಾನೂನು ಕ್ರಮಕ್ಕೆ ಗುರಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

    ಇಂತಹ ನೀಚ ಕೃತ್ಯವೆಸಗಿದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು, ಈ ಘಟನೆಯಿಂದ ನಗರದ ಪೋಷಕರು ಆತಂಕಗೊಂಡಿದ್ದಾರೆ. ನೆರೆಹೊರೆಯ ಜನರೇ ಆಟವಾಡುವ ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತಹ ಕೃತ್ಯಕ್ಕೆ ಮುಂದಾದರೆ ಗತಿ ಏನು? ಮುಗ್ದ ಮಕ್ಕಳ ಮೇಲೆ ಅತ್ಯಾಚಾರ ಎಸಗುವಂತಹ ಪ್ರಕರಣಗಳು ಮತ್ತೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ಆರೋಪಿಗಳಿಗೆ ನೀಡುವ ಕಠಿಣ ಶಿಕ್ಷೆ ಅಂತಹ ದುಷ್ಟರಿಗೆ ಪಾಠವಾಗಬೇಕು. ಸಾರ್ವಜನಿಕರು ನಿರಾತಂಕವಾಗಿ ಬಾಳುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಒತ್ತಾಯಿಸಿದರು.

   ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಸೇರಿದಂತೆ ಕನ್ನಡಪರ, ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿ ಹೇಯ ಕೃತ್ಯ ಖಂಡಿಸಿದವು. ಈಲ್ಲಾಡಳಿತ ಸುರಕ್ಷತಾ ಕ್ರಮ ಕೈಗೊಳ್ಳಬೇಕು, ದುಷ್ಕøತ್ಯಗಳು ಮರುಕಳಿಸದಂತೆ ಎಚ್ಚರಿಕೆವಹಿಸಬೇಕು ಎಂದು ಆಗ್ರಹಿದರು.

    ಸುಮಾರು 52 ವರ್ಷದ ನಸ್ರುಲ್ಲಾ ಖಾನ್ ಎಂಬ ವ್ಯಕ್ತಿ ಈದ್ಗಾ ಮೊಹಲ್ಲಾದಲ್ಲಿ ಗ್ಯಾರೇಜ್ ನಡೆಸುತ್ತಿದ್ದು, ಈ ತಿಂಗಳ 5ರಂದು ಸಂಜೆ ಸುಮಾರು 5.30ರ ಸಮಯದಲ್ಲಿ ಇಸ್ತ್ರಿಗೆ ಅಂಗಡಿಗೆ ಬಟ್ಟೆ ಕೊಡಲು ಬಾಲಕಿ ಹೋಗಿ ಬರುತ್ತಿದ್ದಾಗ ಆರೋಪಿ ಈ ಕೃತ್ಯ ಎಸಗಿದನೆಂದು ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಘಟನೆ ಬಗ್ಗೆ ಆತಂಕ, ಆಕ್ರೋಶಗೊಂಡ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಠಾಣೆಯ ಬಳಿ ಜಮಾಯಿಸಿ ಯಾವುದೇ ಕಾರಣಕ್ಕೂ ಆರೋಪಿ ತಪ್ಪಿಸಿಕೊಳ್ಳಲು ಬಿಡಬಾರದು. ಆತನ ವಿರುದ್ಧ ಕಠಿಣ ಕಾನೂನಿನ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದರು.

     ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಶಾಸಕ ಜಿ.ಬಿ. ಜ್ಯೋತಿಗಣೇಶ್, ಯಾವುದೇ ಕಾರಣಕ್ಕೂ ಈ ನೀಚ ಕೃತ್ಯವೆಸಗಿರುವ ಆರೋಪಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇಂಥ ಅತ್ಯಾಚಾರಿಗಳಿಗೆ ಕಾನೂನು ಕಠಿಣ ಶಿಕ್ಷೆ ವಿಧಿಸಲಿದೆ ಎಂದು ಭರವಸೆಯ ಮಾತುಗಳಾಡಿದರು.

     ನಂತರ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಪ್ರಕರಣ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿಕೊಂಡರು.ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ನಿಸಾರ್ ಅಹಮದ್, ಸೈಯದ್ ಬಹರುಹಾನುದ್ದೀನ್, ಮೊಹಮ್ಮದ್ ಆಸೀಫ್, ಸಿದ್ದೀಕ್ ಅಹಮದ್, ಜೀಯ್ ಉಲ್ಲಾ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link