ಕುಣಿಗಲ್
ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವರ್ಗಾವಣೆ ಮಾಡಿರುವ ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿ ರವರನ್ನು ವಜಾಗೊಳಿಸಿ ಪುನರ್ ಕಾರ್ಮಿಕ ಮಂಡಳಿಗೆ ನೇಮಕ ಮಾಡುವಂತೆ ಆಗ್ರಹಿಸಿ ಶ್ರಮಜೀವಿ ಕಟ್ಟಡ ನಿರ್ಮಾಣ ಕಾರ್ಮಿಕರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಎಸ್.ಟಿ. ಕೃಷ್ಣರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕರು ಪಟ್ಟಣದ ಮುಖ್ಯರಸ್ತೆಯಲ್ಲಿ ಘೋಷಣೆ ಕೂಗುತ್ತ ಪ್ರತಿಭಟನೆಯಲ್ಲಿ ತೆರಳಿ ತಾಲ್ಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಕುರಿತು ಮಾತನಾಡಿದ ಅಧ್ಯಕ್ಷ ಎಸ್.ಟಿ. ಕೃಷ್ಣರಾಜು, ಉತ್ತಮ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಕೆಲಸ ನಿರ್ವಹಿಸಲು ಬಿಡುತ್ತಿಲ್ಲ, ವಿವಿಧ ಇಲಾಖೆಗಳಲ್ಲಿ ಉತ್ತಮ ಸೇವೆ ಮಾಡುತ್ತ ಬಂದಿರುವ ರೋಹಿಣಿ ಸಿಂಧೂರಿ ಅವರನ್ನು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿಯೂ ಅತ್ಯುತ್ತಮ ಕೆಲಸ ಮಾಡುತ್ತಿದ್ದರು.
ಆದರೆ ಇಂದಿನ ಸರ್ಕಾರ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿರುವ 8000 ಕೋಟಿ ಹಣವನ್ನು ಇತರೆ ಇಲಾಖೆಗಳಿಗೆ ನೀಡಲು ಬಳಸಲು ಅವಕಾಶಕ್ಕೆ ಎಡೆ ಮಾಡಿಕೊಡದ ಕಾರಣ ಅದನ್ನೇ ಗುರಿಯಾಗಿಸಿಕೊಂಡು ಉತ್ತಮ ಅಧಿಕಾರಿಯನ್ನು ರಾತ್ರೋರಾತ್ರಿ ಎತ್ತಂಗಡಿ ಮಾಡಿರುವ ಸರ್ಕಾರದ ಕ್ರಮ ಖಂಡನೀಯ. ಇಂತಹ ಪ್ರಕರಣಗಳು ಇನ್ಮುಂದೆ ರಾಜ್ಯದಲ್ಲಿ ನಡೆಯಲು ನಮ್ಮ ಸಂಘಟನೆಗಳು ಬಿಡುವುದಿಲ್ಲ. ನಿಮ್ಮ ಸರ್ಕಾರ ಜನಪರ ಕೆಲಸ ಮಾಡುತ್ತದೆ ಎಂದರೆ ಇದೇನಾ ಎಂದು ಕಟುವಾಗಿ ಟೀಕಿಸಿ ವರ್ಗಾವಣೆಯನ್ನು ವಜಾಗೊಳಿಸುವಂತೆ ಆಗ್ರಹಿಸಿದರು. ನಂತರ ತಹಸೀಲ್ದಾರ್ ಅವರಿಗೆ ಮನವಿ ಪತ್ರ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ