ಯಡಿಯೂರಪ್ಪ ಸರಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ

ಹೊಸಪೇಟೆ:

     ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಪತನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಶಾಸಕರನ್ನು ಖರೀದಿಸಿರುವ ಬಗ್ಗೆ ಬಹಿರಂಗಗೊಂಡ ಆಡಿಯೋ ಬಂದ ಹಿನ್ನೆಲೆಯಲ್ಲಿ ಕೂಡಲೇ ಯಡಿಯೂರಪ್ಪ ನೇತೃತ್ವದ ಸರಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್, ಹೊಸಪೇಟೆ ಮತ್ತು ಕಮಲಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

      ನಗರದ ನಾನಾ ರಸ್ತೆಗಳಲ್ಲಿ ಸಂಚರಿಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಯಡಿಯೂರಪ್ಪ ನೇತೃತ್ವದ ಸರಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ತಾಲೂಕು ಕಚೇರಿ ಅಧಿಕಾರಿಗಳ ಮೂಲಕ ರಾಷ್ಟçಪತಿಗಳಿಗೆ ಮನವಿ ರವಾನಿಸಿದರು.

     ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎನ್.ಎಫ್. ಇಮಾಮ್ ನಿಯಾಜಿ, ಮುಖಂಡರಾದ ಗುಜ್ಜಲ್ ನಾಗರಾಜ್, ತಾರಿಹಳ್ಳಿ ವೆಂಕಟೇಶ್, ನಿಂಬಗಲ್ ರಾಮಕೃಷ್ಣ, ಡಿ.ವೆಂಕಟರಮಣ, ವಿ.ವೇಂಕಟೇಶ್ವರ ರೆಡ್ಡಿ, ಫಹೀಂ ಬಾಷಾ, ಚಿದಾನಂದ, ಮೊಹಮ್ಮದ್ ಗೌಸ್, ಬೆಲ್ಲದ ರೋಫ್ ಸಾಬ್, ಭಾಗ್ಯಲಕ್ಷ್ಮಿ ಬರಾಡೆ, ಬಾನೂಭಿ, ರಜೀಯಾ ಬೇಗಂ, ಕಾಲಾಂ, ಹೆಚ್.ಎಸ್. ವೆಂಕಪ್ಪ, ಎರ್ರಿ ಸ್ವಾಮಿ, ಬಸವಲಿಂಗಪ್ಪ ಮೇಟಿ, ವಿಜಯಕುಮಾರ್, ಅಬುಲ್ ಕಾಲಾಂ ಅಜಾದ್, ತೇಜುನಾಯಕ, ಮೀರ್ ಜಾಫರ್ ಇತರರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link