ಮೈಸೂರು ಬ್ಯಾಂಕ್ ವೃತ್ತದಲ್ಲಿ ದಲಿತ ಹಕ್ಕುಗಳ ಸಮಿತಿಯಿಂದ ಪ್ರತಿಭಟನೆ..!!

ಬೆಂಗಳೂರು

       ಭೂರಹಿತ ದಲಿತರಿಗೆ ಭೂಮಿ ನೀಡಲು ಪ್ರತಿ ತಾಲೂಕಿನಲ್ಲೂ 500 ಎಕರೆ ಭೂಮಿ ಖರೀದಿಸಿ ಹಂಚಿಕೆ ಮಾಡುವ ಕಾರ್ಯಕ್ರಮವನ್ನು ಪ್ರಸ್ತುತ ಸಾಲಿನ ಬಜೆಟ್‍ನಲ್ಲಿ ಘೋಷಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

          ಮೈಸೂರು ಬ್ಯಾಂಕ್ ವೃತ್ತದಲ್ಲಿ ದಲಿತ ಹಕ್ಕುಗಳ ಸಮಿತಿಯ ನೂರಾರು ಸದಸ್ಯರು ಸೇರಿ ಕೃಷಿಯಲ್ಲಿ ತೊಡಗಲು ಬಯಸುವ ಭೂರಹಿತ ದಲಿದಲಿತರಿಗೆ ಭೂಮಿ ನೀಡಬೇಕು ಎಂದು ಒತ್ತಾಯಿಸಿದರು.ಮೀಸಲಿಟ್ಟ ಅಭಿವೃದ್ಧಿ ಹಣ ಸಮರ್ಪಕವಾಗಿ ಜಾರಿಯಾಗಬೇಕು.ಜತೆಗೆ ಈ ಸಂಬಂಧ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು .

          ಅದೇರೀತಿ, ನಿವೇಶನ ರಹಿತ ದಲಿತರಿಗೂ 4 ಗುಂಟೆ ಭೂಮಿ ನೀಡಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಮಿತಿಯ ಸಂಚಾಲಕ ಎನ್.ನಾಗರಾಜ್, ಪ್ರತಿ ಗ್ರಾಮದಲ್ಲೂ ದಲಿತರಿಗೆ ಪ್ರತ್ಯೇಕ ರುದ್ರ ಭೂಮಿ ಮೀಸಲಿಡಬೇಕು . ಜೊತೆಗೆ, ದಲಿತರ ಸಾಲ ಮನ್ನಾ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ದಲಿತ ಕುಟುಂಬಗಳಿಗೆ ಕಡ್ಡಾಯವಾಗಿ 200 ದಿನ ಉದ್ಯೋಗ ಒದಗಿಸಬೇಕು ಎಂದು ಒತ್ತಾಯಿಸಿದರು.

           ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯಿದೆ ರಾಜ್ಯ ವ್ಯಾಪ್ತಿ ಕಟ್ಟುನಿಟ್ಟಾಗಿ ಜಾರಿಯಾಗಬೇಕು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪಯೋಜನೆ ಜಾರಿ ಮಾಡದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧಿಸಬೇಕು. ಈ ಬೇಡಿಕೆಗಳು ಈಡೇರಿಸದಿದ್ದಲ್ಲಿ, ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಮಿತಿಯ ಸಂಚಾಲಕರಾದ ಗೋಪಾಲಕೃಷ್ಣ ಹರಳಹಳ್ಳಿ, ಎನ್.ರಾಜಣ್ಣ, ಹೆಚ್.ಜಿ.ನಾಗಣ್ಣ, ಮಾಯಶ್ರೀ ಸೇರಿದಂತೆ ಪ್ರಮುಖರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap