ಹೊನ್ನಾಳ್ಳಿ
ನೀರು ಪೂರೈಕೆಯಲ್ಲಿನ ವ್ಯತ್ಯಯ ವಿರೋಧಿಸಿ ಹೊನ್ನಾಳಿ ತಾಲೂಕಿನ ಎಚ್. ಕಡದಕಟ್ಟೆ ಗ್ರಾಪಂ ವ್ಯಾಪ್ತಿಯ ಹ್ಯಾಂಡ್ ಪೋಸ್ಟ್ ಬಡಾವಣೆಯ ಸಾರ್ವಜನಿಕರು ಬುಧವಾರ ಎಚ್. ಕಡದಕಟ್ಟೆ ಗ್ರಾಪಂ ಕಚೇರಿ ಎದುರು ಖಾಲಿ ಕೊಡಗಳನ್ನು ಇಟ್ಟುಕೊಂಡು, ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ತಾಪಂ ಇಒ ಎಚ್.ವಿ. ರಾಘವೇಂದ್ರ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ಸಧ್ಯಕ್ಕೆ ಬೇಡಿಕೆಗನುಗುಣವಾಗಿ ಹೆಚ್ಚಿನ ಸಂಖ್ಯೆ ಟ್ಯಾಂಕರ್ ನೀರು ಪೂರೈಸಲಾಗುವುದು. ಮುಂದಿನ ನಾಲ್ಕು ದಿನಗಳಲ್ಲಿ ಹೊಸದಾಗಿ ಕೊಳವೆ ಬಾವಿ ತೋಡಿಸಿ ನೀರು ಸರಬರಾಜು ಮಾಡಲಾಗುವುದು. ಗ್ರಾಮದ ಸುತ್ತಮುತ್ತ ಇರುವ ತೋಟ ಹಾಗೂ ಇತರ ಕೊಳವೆ ಬಾವಿಗಳ ಮಾಲೀಕರು ನೀರು ಕೊಟ್ಟರೆ ತಿಂಗಳಿಗೆ 10 ಸಾವಿರ ರೂ. ಪಾವತಿಸಿ ನೀರು ಸರಬರಾಜು ಮಾಡಲಾಗುವುದು ಎಂದು ಭರವಸೆ ನೀಡಿದರು. ಇದರಿಂದ ತೃಪ್ತಿಯಾದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು. ಗ್ರಾಪಂ ಅಧ್ಯಕ್ಷೆ ಲಕ್ಷ್ಮಮ್ಮ ನಾಗಪ್ಪ, ಸದಸ್ಯ ಬಿ.ಕೆ. ಮಾದಪ್ಪ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
