ಚಿತ್ರದುರ್ಗ:
ಗಾಯತ್ರಿ ಕಲ್ಯಾಣ ಮಂಟಪದ ಸಮೀಪವಿರುವ ಪೆಟ್ರೋಲ್‍ಬಂಕ್‍ಗೆ ಬುಧವಾರ ಸಂಜೆ ಬೆಂಕಿ ಬಿದ್ದ ಪರಿಣಾಮ ಸುಟ್ಟ ಗಾಯಗಳಿಂದ ನರಳುತ್ತಿರುವ ಟ್ಯಾಂಕರ್ ವಾಹನ ಚಾಲಕ ಹಾಗೂ ಕ್ಲೀನರ್‍ಗೆ ಪರಿಹಾರ ನೀಡಬೇಕಲ್ಲದೆ ಪೆಟ್ರೋಲ್ ಬಂಕ್ ಮಾಲೀಕರ ವಿರುದ್ದ ಕ್ರಿಮಿನಲ್ ಕೇಸು ದಾಖಲಿಸುವಂತೆ ವಂದೆ ಮಾತರಂ ಜಾಗೃತಿ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ವಿದ್ಯಾವಿಕಾಸ ಶಾಲೆ ಸಮೀಪದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಶಾಲೆಗಳ ಸುತ್ತಮುತ್ತ ಪೆಟ್ರೋಲ್ ಬಂಕ್‍ಗೆ ಅನುಮತಿ ನೀಡಬಾರದೆಂಬ ನಿಯಮವಿದ್ದರೂ ಪಾಲಿಸದೆ ನಿರ್ಲಕ್ಷೆ ವಹಿಸಿ ಪೆಟ್ರೋಲ್ ಬಂಕ್‍ಗೆ ಅನುಮತಿ ನೀಡಿರುವ ಅಧಿಕಾರಿಗಳನ್ನು ಕೂಡಲೆ ಸೇವೆಯಿಂದ ವಜಾಗೊಳಿಸಿ ತಪ್ಪಿತಸ್ಥರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಡೀಸೆಲ್/ಪೆಟ್ರೋಲ್ ಟ್ಯಾಂಕರ್‍ನಿಂದ ಅನ್‍ಲೋಡ್ ಮಾಡುವಾಗ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಹೆಚ್ಚಿನ ಹಾನಿ ಸಂಭವಿಸಿಲ್ಲ. ಪೆಟ್ರೋಲ್ ಬಂಕ್ ಸುತ್ತಮುತ್ತ ಯಾವುದೇ ಶಾಲಾ-ಕಾಲೇಜುಗಳು ಇರಬಾರದೆಂಬ ಸರ್ಕಾರದ ಆದೇಶವಿದ್ದರೂ ಅಧಿಕಾರಿಗಳು ಯಾವುದನ್ನು ಪಾಲಿಸದೆ ನಿರ್ಲಕ್ಷೆ ವಹಿಸಿರುವುದೇ ಬೆಂಕಿ ಅನಾಹುತಕ್ಕೆ ಕಾರಣವಾಗಿದೆ. ಕೂಡಲೆ ಪರಿಶೀಲಿಸಿ ಪೆಟ್ರೋಲ್ ಬಂಕ್ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಎಚ್ಚರಿಸಿದರು.
ವಂದೇ ಮಾತರಂ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ತಾಲೂಕು ಅಧ್ಯಕ್ಷ ಟಿ.ಆನಂದ್, ನಗರಾಧ್ಯಕ್ಷ ರಘು, ವಿದ್ಯಾರ್ಥಿ ಘಟಕದ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಚೌಡೇಶ್, ಧನಂಜಯ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
