ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಆಗ್ರಹಿಸಿ ಧರಣಿ

ಬೆಂಗಳೂರು

       ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಆಗ್ರಹಿಸಿ ವಿಧಾನಸೌಧದ ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿ ಮುಂದೆ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಸಚಿವಾಲಯದ 100ಕ್ಕೂ ಹೆಚ್ಚಿನ ನೌಕರರು ದಿಢೀರ್ ಧರಣಿ ನಡೆಸಿದರು.

      ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿಗಳ ಅಂಕಿತ ಹಾಕಿದ್ದರೂ ಸರ್ಕಾರ ಬಡ್ತಿ ಮೀಸಲಾತಿ ವಿಧೇಯಕ ಜಾರಿಗೆ ಮೀನಾಮೇಷ ಎಣಿಸುತ್ತಿದೆ. ಸುಪ್ರೀಂ ಕೋರ್ಟಿನಲ್ಲಿ ಬಿ.ಕೆ.ಪವಿತ್ರ ಪ್ರಕರಣದ ತೀರ್ಪು ಹೊರಬಿದ್ದಿಲ್ಲ. ಅಹಿಂಸಾ ಸಂಘಟನೆ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

        ಪ್ರಕರಣ ಸಂಬಂಧ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಸರ್ಕಾರಕ್ಕೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದರೂ ಕಾಯ್ದೆ ಜಾರಿಗೆ ಸರ್ಕಾರ ಇನ್ನೂ ಮುಂದಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

       ಈ ಹಿಂದೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ನೇತೃತ್ವದಲ್ಲಿ ಸಭೆ ನಡೆಸಿ ಕಾಯ್ದೆ ಜಾರಿ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಮುಖ್ಯಮಂತ್ರಿ ಕಚೇರಿಗೆ ಮಾಹಿತಿ ರವಾನಿಸಲಾಗಿತ್ತು. ಆದರೆ ಕಾಯ್ದೆ ಜಾರಿಗೆ ಸುಪ್ರೀಂಕೋರ್ಟ್ ನಲ್ಲಿರುವ ನ್ಯಾಯಾಂಗ ನಿಂದನೆ ಅರ್ಜಿ ಪ್ರಕರಣ ಅಡ್ಡಿಯಾಗಿದೆ ಎನ್ನಲಾಗಿದೆ.

        ಸರ್ಕಾರದ ತೀರ್ಮಾನವನ್ನು ಲೆಕ್ಕಿಸದೆ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಕಾಯ್ದೆ ಜಾರಿಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿಗೆ ಮುಂದಾದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link