ರಾಜೀನಾಮೆಗೆ ಒತ್ತಾಯಿಸಿ ನಾಳೆ ಪ್ರತಿಭಟನೆ

0
14

ದಾವಣಗೆರೆ:

         ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಭ್ರಷ್ಟಾಚಾರ ಖಂಡಿಸಿ, ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಒತ್ತಾಯಿಸಿ ನಾಳೆ (ಜ.7ರಂದು) ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ತಿಳಿಸಿದರು.

         ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಸಚಿವ ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಒತ್ತಾಯಿಸಿ ಹಾಗೂ ಸಮವಸ್ತ್ರ, ಬೈಸಿಕಲ್, ಪಠ್ಯ ಪುಸ್ತಕ, ಶೂ ಖರೀದಿ ಅವ್ಯವಹಾರ ವಿರೋಧಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ, ಎಸಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಎಂದರು.

           ಮೈತ್ರಿ ಸರ್ಕಾರದ ಭ್ರಷ್ಟಾಚಾರ, ಹಗರಣಗಳ ತನಿಖಗೆ ಒತ್ತಾಯಿಸಲಾಗುವುದು. ಸಚಿವ ಪುಟ್ಟರಂಗ ಶೆಟ್ಟಿ ಆಪ್ರನ ಬಳಿ ಪತ್ತೆಯಾದ 27 ಲಕ್ಷ ರು.ಗೂ ಅದಿಕ ಹಣವಿದ್ದು, ಅದು ಭ್ರಷ್ಚಾಚಾರದ ಹಣವಾಗಿದೆ. ಈ ಬಗ್ಗೆ ತನಿಖೆಯಾಗಬೇಕು, ಸಚಿವ ಪುಟ್ಟರಂಗಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪ್ರತಿಭಟನೆಯ ಮೂಲಕ ಒತ್ತಾಯಿಸಲಾಗುವುದು ಎಂದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here