ಬೆಂಗಳೂರು
ನೌಕರಿ ಖಾಯಂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 6 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಮೈಸೂರು ಮಹಾನಗರ ಪಾಲಿಕೆ ಕಾರ್ಮಿಕರ ಜೊತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಾಳೆ ಸಭೆ ನಡೆಸಲಿದ್ದಾರೆ. ಪಾಲಿಕೆಯ ಆಯುಕ್ತ ಜಗದೀಶ್ ಹಾಗೂ ಪೌರಕಾರ್ಮಿಕ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಈ ಮಧ್ಯೆ ಪೌರ ಕಾರ್ಮಿಕರ ಮುಷ್ಕರದ ಹಿನ್ನೆಲೆಯಲ್ಲಿ ಸ್ಥಳೀಯರೇ ಟ್ರಾಕ್ಟರ್ ಮೂಲಕ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸಿದ ಬಗ್ಗೆ ವರದಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








