ಬೆಂಗಳೂರು
ಗೋ ಸಂರಕ್ಷಕ, ಹಿಂದೂ ಪರ ಹೋರಾಟಗಾರ ಶಿವು ಉಪ್ಪಾರ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ, ರಾಷ್ಟ್ರೀಯ ಕೇಸರಿ ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೇರಿದ ರಾಷ್ಟ್ರೀಯ ಕೇಸರಿ ಒಕ್ಕೂಟ ಹಾಗೂ ಹಿಂದೂ ಪರಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರಗಳು ಪ್ರತಿಭಟನೆ ನಡೆಸಿ ಗೋಸಂರಕ್ಷಕ ಶಿವು ಉಪ್ಪಾರ ಹತ್ಯೆಯನ್ನು ಸಿಬಿಐಗೆ ವಹಿಸಲೇಬೇಕು ಒತ್ತಾಯಿಸಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಂಚಾಲಕ ಹರೀಶ್ ಭಾರತದಲ್ಲಿ ಹಿಂದೂಗಳ ಬಹುಸಂಖ್ಯಾತರಾಗಿದ್ದರು. ಅಲ್ಪಸಂಖ್ಯಾತರಂತೆ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದೂಗಳನ್ನು ಕಡೆಗಣಿಸಿ ರಾಜಕೀಯ ಪಕ್ಷಗಳು ಅಲ್ಪಸಂಖ್ಯಾತರ ಓಲೈಕೆಯನ್ನು ಮುಂದುವರಿಸಿದೆ. ಹಿಂದೂಗಳಿಗೆ ರಕ್ಷಣೆಯೇ ಇಲ್ಲ ಹಿಂದೂಪರ ಹೋರಾಟಗಾರರನ್ನು ಹತ್ಯೆ ಮಾಡಿ ಹೋರಾಟವನ್ನು ಹತ್ತಿಕ್ಕಲಾಗುತ್ತಿದೆ.
ಗೋಕಾಕ್ ಗೋ ಸಂರಕ್ಷಕ ಶಿವು ಉಪ್ಪಾರಅನ್ನು ಹತ್ಯೆ ಮಾಡಿ, ಆರೋಪಿ ಎಂದು ಬಿಂಬಿಸುವ ಪ್ರಯತ್ನಗಳು ನಡೆದಿದೆ ಎಂದು ದೂರಿದರು.
ಶಿವು ಉಪ್ಪಾರ ಹಂತಕರನ್ನು ಕೂಡಲೇ ಬಂಧಿಸಬೇಕು. ಉಪ್ಪಾರ ಕುಟುಂಬಕ್ಕೆ 10 ಲಕ್ಷ ಪರಿಹಾರ ಒದಗಿಸಬೇಕು. ಗೋ ಸಂರಕ್ಷಕರಿಗೆ ಸರ್ಕಾರ ರಕ್ಷಣೆ ನೀಡಬೇಕು. ಹಿಂದೂಪರ ಹೋರಾಟಗಾರರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ರದ್ದುಪಡಿಸಬೇಕು. ಹಿಂದೂ ಧರ್ಮ ಹಾಗೂ ಹಿಂದೂ ದೇವತೆಗಳನ್ನು ಅವಹೇಳನ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪ್ರಮೋದ್ ಮುತಾಲಿಕ್, ನಾರಾಯಣಸ್ವಾಮಿ ಹಾಗೂ ಅನೇಕ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪದಾಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
