ಹಕ್ಕುಗಳ ರಕ್ಷಣೆಗಾಗಿ ನಾಳೆ ಬೃಹತ್ ಪ್ರತಿಭಟನೆ

ದಾವಣಗೆರೆ:

        ದಲಿತ, ಹಿಂದುಳಿದ, ಶೋಷಿತರ ಹಕ್ಕುಗಳ ರಕ್ಷಣೆಗಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ವತಿಯಿಂದ ನಾಳೆ (ಮಾ.28ರಂದು) ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್ ತಿಳಿಸಿದರು.

         ಈ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30ಕ್ಕೆ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬೃಹತ್ ಪ್ರತಿಭಟನಾ ಮೆರವಣಿಗೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಮನವಿಪತ್ರ ಸಲ್ಲಿಸಲಾಗುವುದು. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ದಲಿತ ಬಂಧುಗಳು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

       ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ನಗರದಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್‍ರವರ 13 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಬೇಕು.  .ಬಿ.ಕೃಷ್ಣಪ್ಪನವರ ಜನ್ಮಸ್ಥಳ ಹರಿಹರದಲ್ಲಿ ಪ್ರಮುಖ ಸರ್ಕಲ್‍ಗೆ ಕೃಷ್ಣಪ್ಪ ಹೆಸರನ್ನು ನಾಮಕರಣ ಮಾಡಿ ಕಂಚಿನ ಪ್ರತಿಮೆ ಸ್ಥಾಪಿಸಬೇಕು. ಜಿಲ್ಲಾದ್ಯಂತ ಎಲ್ಲಾ ಹಳ್ಳಿಗಳಲ್ಲಿ ದಲಿತ ಮತ್ತು ಬಡವರಿಗೆ ನಿವೇಶನ ಹಂಚಿಕೆ ಮಾಡಬೇಕೆಂದು ಆಗ್ರಹಿಸಿದರು.

       ಜಿಲ್ಲಾದ್ಯಂತ ಎಸ್ಸಿ/ಎಸ್ಟಿ ಕಾಲೋನಿಗಳಲ್ಲಿ ಅಂಬೇಡ್ಕರ್ ಭವನ, ಬಾಬು ಜಗಜೀವನರಾಮ್ ಭವನ ನಿರ್ಮಾಣ ಮಾಡಬೇಕು. ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಮೂರು ತಿಂಗಳಿಗೊಮ್ಮೆ ಎಸ್ಸಿ/ಎಸ್ಟಿ ಕುಂದುಕೊರತೆ ಸಭೆ ಕರೆಯಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಉದ್ಯೋಗ ಖಾತ್ರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟಬೇಕು. ಹೊನ್ನಾಳಿಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಗಡಿಪಾರು ಮಾಡಬೇಕು. ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರ ಕೊಡಬೇಕು. ಗ್ರಂಥಾಲಯ ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂಬುದು ಒತ್ತಾಯಿಸಿದರು.

         ಸುದ್ದಿಗೋಷ್ಠಿಯಲ್ಲಿ ಸಮಿತಿಯ ಮುಖಂಡರಾದ ಬುಳ್ಳಸಾಗರದ ಸಿದ್ದರಾಮಪ್ಪ, ಜಿಗಳಿ ಹಾಲೇಶ್, ನಾಗರಾಜ್, ಪರಮೇಶ್, ಮಾಲತೇಶ್, ನಾಗರಾಜ್ ನಿಟ್ಟುವಳ್ಳಿ, ಗೋಪನಾಳು ಚಂದ್ರಪ್ಪ ಮತ್ತಿತರರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link