ಉದ್ಯೋಗ ಭದ್ರತೆ, ಭತ್ಯೆ ನೀಡಲು ಸಿಐಟಿಯು ಒತ್ತಾಯ..!

ಹುಳಿಯಾರು:

     ಕೋವಿಡ್ ಸಂದರ್ಭದಲ್ಲಿ ಸಂಕಷ್ಟ ಎದುರಿಸುತ್ತಿರುವ ಬಡ ಕುಟುಂಬಗಳಿಗೆ ಹಾಗೂ ವಿವಿಧ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾತ್ಕಾಲಿಕ ನೌಕರರಿಗೆ ಆರ್ಥಿಕ ನೆರವು ನೀಡುವುದು ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಸಂಘಟನೆಯಿಂದ ಹುಳಿಯಾರಿನಲ್ಲಿ ಪ್ರತಿಭಟನೆ ನಡೆಸಲಾಯಿತು.ಮುಂದಿನ ಆರು ತಿಂಗಳವರೆಗೆ ಮಾಸಿಕ ರೂ 7500 ಕೋವಿಡ್ ಪರಿಹಾರ ನೀಡಬೇಕು, ಕುಟುಂಬದ ಪ್ರತಿ ಸದಸ್ಯನಿಗೂ ಮಾಸಿಕ 10 ಕೆಜಿ ಉಚಿತ ಆಹಾರ ಧಾನ್ಯ ವಿತರಿಸಬೇಕು, ಉದ್ಯೋಗ ಖಾತ್ರಿ ವೇತನವನ್ನು ಕನಿಷ್ಠ ರೂ 600 ಕ್ಕೆ ಹೆಚ್ಚಿಸಬೇಕು ಮತ್ತು ಅದನ್ನು ನಗರಪ್ರದೇಶಕ್ಕೆ ವಿಸ್ತರಿಸಬೇಕು.

    ಶಿಕ್ಷಣ, ಆರೋಗ್ಯ, ರೈಲು, ರಸ್ತೆ, ವಿದ್ಯುತ್, ದೂರಸಂಪರ್ಕ, ವಿಮಾ, ಬ್ಯಾಂಕ್ ಖಾಸಗೀಕರಣ ಪ್ರಕ್ರಿಯೆ ತಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಚಿಕ್ಕನಾಯಕನಹಳ್ಳಿ ತಾಲೂಕು ಅಧ್ಯಕ್ಷರಾದ ಪೂರ್ಣಮ್ಮ, ಹುಳಿಯಾರು ವೃತ್ತದ ಸಿ.ಎಲ್.ಪೂರ್ಣಿಮಾ, ಪಂಕಜ, ಇಂದ್ರ ಹಾಗೂ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link