ಎನ್ ಪಿ ಎಸ್ ರದ್ದತಿಗೆ ಆಗ್ರಹಿಸಿ ನಗರದಲ್ಲಿ ಶಾಲಾ ಶಿಕ್ಷಕರ ಪ್ರತಿಭಟನೆ..!

ಬೆಂಗಳೂರು

      ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯಲ್ಲಿ ಮುಂದುವರಿಸಿ ಮತ್ತೊಮ್ಮೆ ಕೋರಿಕೆ ವರ್ಗಾವಣೆ ನಡೆಸಬೇಕೆಂದು ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

      ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂಭಾಗ ಸೇರಿದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂರಾರು ಸದಸ್ಯರು ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದ ಪೂರ್ಣಗೊಳಿಸಿರುವ ಶಿಕ್ಷಕರರೆಂದು ಪರಿಗಣಿಸಿಬೇಕು. ವೇತನ ನಿಗದಿಗೊಳಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು

      ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಆರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಬೇಕು. ಪ್ರತಿ ವಿಷಯಕ್ಕೆ ಒಬ್ಬರೇ ಶಿಕ್ಷಕರನ್ನು ನಿಯೋಜಿಸಬೇಕು. ಶಿಕ್ಷಕ ವಿದ್ಯಾರ್ಥಿ ಅನುಪಾತ ಗುರುತಿಸಿ, ಮುಖ್ಯೋಪಾಧ್ಯಾಯ ದೈಹಿಕ ಶಿಕ್ಷಕರನ್ನು ಹೊರತುಪಡಿಸಿ ಹೆಚ್ಚುವರಿ ಪ್ರಕ್ರಿಯೆ ಆರಂಭಿಸಬೇಕು.

     6ನೇ ವೇತನ ಆಯೋಗದ ಅಂತಿಮ ಶಿಫಾರಸಿನ ಅನ್ವಯ ಮುಖ್ಯಗುರುಗಳಿಗೆ ಮುಂಬಡ್ತಿ ನೀಡಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ, ಎಲ್ಲಾ ಸೌಲಭ್ಯಗಳನ್ನು ನೀಡಬೇಕೆಂದು ಆಗ್ರಹಿಸಿದರು .ಪ್ರತಿಭಟನೆಯಲ್ಲಿ ಅಧ್ಯಕ್ಷ ಎಂ.ವಿ. ನಾರಾಯಣಸ್ವಾಮಿ, ಕಾರ್ಯದರ್ಶಿ ಚಂದ್ರಶೇಖರ್, ಸೇರಿದಂತೆ ಇತರ ಪದಾಧಿಕಾರಿಗಳು, ಸದಸ್ಯರುಗಳು ಪಾಲ್ಗೊಂಡಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link